Site icon PowerTV

ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬ ಆಚರಣೆಗೆ ಹೇರಿದ್ದ ನಿರ್ಬಂಧ ಆದೇಶ ವಾಪಸ್

ಬೆಂಗಳೂರು : ಕರ್ನಾಟಕ ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ಹೇರಿದ್ದ ನಿರ್ಬಂಧ ಆದೇಶವನ್ನು ಸರ್ಕಾರ ವಾಪಸ್ ಪಡೆದಿದೆ.

ಈ ಆದೇಶದ ಕುರಿತು ಪವರ್​ ಟಿವಿಯಲ್ಲಿ ವರದಿ ಪ್ರಸಾರ ಆಗ್ತಿದ್ದಂತೆ ಸಚಿವರ ಸೂಚನೆ ಮೇರೆಗೆ ಜಾರಿಯಾಗಿದ್ದ ಆದೇಶವನ್ನು ಹಿಂಪಡೆಯಲಾಗಿದೆ.

ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ನಿರ್ಬಂಧಿಸಿ ರಾಜ್ಯ ಸರ್ಕಾರದ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು  ಸುತ್ತೋಲೆ ಹೊರಡಿಸಿತ್ತು. ಸಮಾಜ ಕಲ್ಯಾಣ ಖಾತೆ ಸಚಿವ ಹೆಚ್.ಸಿ. ಮಹದೇವಪ್ಪ ಸೂಚನೆಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿತ್ತು.

ಈ ಸುದ್ದಿ ಓದಿದ್ದೀರಾ? : ಕಾಂಗ್ರೆಸ್​ನವರು 90% ಮುದ್ದಹನುಮೇಗೌಡರಿಗೆ ಟಿಕೆಟ್ ಕೊಡಲ್ಲ : ಶಾಸಕ ಸುರೇಶ್ ಗೌಡ 

ಪವರ್​ ಟಿವಿ ವರದಿ ಪ್ರಸಾರದ ಬಳಿಕ ಹಿಂದೂ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿತ್ತು. ಕೇವಲ ವಸತಿ ಶಾಲೆಗಳನ್ನೇ ಗುರಿಯಾಗಿಸಿದ್ದು ಯಾಕೆ ಅನ್ನೋ ಪ್ರಶ್ನೆ ಉದ್ಭವ ಆಗಿತ್ತು. ಹೀಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಇದೀಗ ತನ್ನ ಆದೇಶವನ್ನು ವಾಪಸ್ ಪಡೆದಿದೆ.

Exit mobile version