Site icon PowerTV

ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್​ಗೆ ಫೆ.22 ರವರೆಗೆ ನ್ಯಾಯಾಂಗ ಬಂಧನ

ಜಾರ್ಖಂಡ್​ : ಭೂಹಗರಣ ಪ್ರಕರಣ ಸಂಬಂಧ ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ವಿಶೇಷ ಪಿಎಂಎಲ್‌ಎ ನ್ಯಾಯಾಲಯ ಆದೇಶಿಸಿದೆ.

ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾದ ಕಾರ್ಯನಿರ್ವಾಹಕ ಅಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿಯು ಆಗಿರುವ ಹೇಮಂತ್ ಸೊರೇನ್ ಇದೀಗ ಜೈಲು ಹಕ್ಕಿಯಾಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸೊರೇನ್ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಅಡ್ವಕೇಟ್ ಜನರಲ್ ರಾಜೀವ್ ರಂಜನ್‌ ಅವರು, ಸೊರೇನ್ ಅವರನ್ನು ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯವು ಅವರನ್ನು ಫೆ.22ರವರೆಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ. ಅವರ ಜಾಮೀನಿಗಾಗಿ ನಾವು ಅರ್ಜಿ ಸಲ್ಲಿಸಲಿದ್ದೇವೆ ಎಂದು ಹೇಳಿದ್ದಾರೆ.

ಜನವರಿ 31ರಂದು ED ಬಂಧನ

ಹೇಮಂತ್ ಸೊರೇನ್ ಅವರನ್ನು ರಾಂಚಿಯ ಬಿರ್ಸಾ ಮುಂಡಾ ಕೇಂದ್ರೀಯ ಕಾರಾಗೃಹಕ್ಕೆ ಕರೆದುಕೊಂಡು ಹೋಗಲಾಗಿದೆ. ಸೊರೇನ್ ಅವರನ್ನು ಜನವರಿ 31ರಂದು ಇ.ಡಿ. ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಲಯವು ಇ.ಡಿ. ವಶಕ್ಕೆ ನೀಡಿತ್ತು.

Exit mobile version