Site icon PowerTV

ಅರಕಲಗೂಡಿನಲ್ಲಿ ಭೀಕರ ಅಪಘಾತ; ಇಬ್ಬರು ಸಾವು 

ಹಾಸನ: ಅರಕಲಗೂಡು ತಾಲೂಕಿನಲ್ಲಿ ಗುರುವಾರ ಮುಂಜಾನೆ ಪ್ರತ್ಯೇಕ ಅಪಘಾತ ನಡೆದಿದೆ. ಅಪಘಾತದಲ್ಲಿ ಇಬ್ಬರು ಮೃತಪಟ್ಟರೆ, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ.

ಅರಕಲಗೂಡು ಪಟ್ಟಣದ ಸಾರಿಗೆ ಬಸ್ ಡಿಪೋ ಹಿಂಭಾಗ ನಿಂತಿದ್ದ ಐಚರ್ ವಾಹನಕ್ಕೆ ಓಮಿನಿ ಕಾರು ಡಿಕ್ಕಿ ಹೊಡೆದಿದೆ. ಕಾರು ಚಲಾಯಿಸುತ್ತಿದ್ದ ಹೂವಿನ ವ್ಯಾಪಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಜೇಗೌಡ (38) ಮೃತ ದುರ್ದೈವಿ. ಮಂಜೇಗೌಡ ಪತ್ನಿ ಅನಸೂಯ ಎಂಬುವವರು ಗಂಭೀರ ಗಾಯಗೊಂಡಿದ್ದಾರೆ. ಮಂಜೇಗೌಡ ಅವರು ಅರಕಲಗೂಡು ಪಟ್ಟಣದ ವಿನಾಯಕ ನಗರ ನಿವಾಸಿ ಆಗಿದ್ದಾರೆ.

ಇನ್ನು ಅಪಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಾಯಾಳು ಅನಸೂಯ ಅವರನ್ನು ಅರಕಲಗೂಡು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

Exit mobile version