Site icon PowerTV

ದೇವರು, ಜನರ ಆಶೀರ್ವಾದ ಇದ್ದರೆ ಗೆದ್ದು ಬರ್ತಿನಿ : ಪ್ರಜ್ವಲ್ ರೇವಣ್ಣ

ಹಾಸನ : ದೇವರ ಆಶೀರ್ವಾದ, ಜನರ ಆಶೀರ್ವಾದ ಇದ್ದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಗೆದ್ದು ಬರ್ತಿನಿ ಎಂದು ಸಂಸದ ಪ್ರಜ್ವಲ್ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಒಂದು ದಿನವೂ ಕ್ಷೇತ್ರದಿಂದ ಹೊರಗೆ ಹೋದವನಲ್ಲ. ಜಿಲ್ಲೆಯ ನೊಂದ ಜನರಿಗೆ ನ್ಯಾಯ ಒದಗಿಸಿದ್ದೇನೆ ಎಂದು ಹೇಳಿದರು.

ನಾನು ಪ್ರಚಾರಕ್ಕೆ ಹೋದ ಕಡೆಯಲೆಲ್ಲಾ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗುತ್ತಿದೆ. ನೀವು ಗೆಲ್ತಿರಾ ಅಂತ ಜನರು ಹೇಳುತ್ತಿದ್ದಾರೆ. ಐದು ವರ್ಷದಲ್ಲಿ ಹನ್ನೆರಡುವರೆ ಸಾವಿರ ಕೋಟಿ ಕೇಂದ್ರದಿಂದ ಅನುದಾನ ತಂದಿದ್ದೇನೆ. ಅದಕ್ಕೆ ನರೇಂದ್ರ ಮೋದಿ, ಹೆಚ್​.ಡಿ. ದೇವೇಗೌಡರು ಹಾಗೂ ಎಲ್ಲರೂ ಸಹಕಾರ ಕೊಟ್ಟಿದ್ದಾರೆ. ಅವರ ಆಶೀರ್ವಾದದ ಮೇಲೆ ಕೆಲಸ ಮಾಡಿಕೊಂಡು ಹೋಗುತ್ತಿದ್ದೇನೆ ಎಂದು ತಿಳಿಸಿದರು.

ಬಿಜೆಪಿ ನಾಯಕರು ನನ್ನ ಟಚ್‌ನಲ್ಲಿ ಇದ್ದಾರೆ

ಜನರು ಮತ್ತೊಮ್ಮೆ ಅವಕಾಶ ಕೊಡಬೇಕು ಎಂದು ಮಾತನಾಡುತ್ತಿದ್ದಾರೆ. ದೇವರ ಆಶೀರ್ವಾದ, ಜನರ ಆಶೀರ್ವಾದ ಇದ್ದರೆ ಮುಂದಿನ ದಿನಗಳಲ್ಲಿ ಗೆದ್ದು ಬರ್ತಿನಿ. ಬಿಜೆಪಿ ಜೊತೆ ಹೊಂದಾಣಿಕೆ ನೂರಕ್ಕೆ ನೂರು ಅನುಕೂಲವಾಗುತ್ತದೆ. ಬಿಜೆಪಿ ಕಾರ್ಯಕರ್ತರು, ಮುಖಂಡರು ಬಹಳಷ್ಟು ಜನ ನನ್ನ ಜೊತೆ ಟಚ್‌ನಲ್ಲಿ ಇದ್ದಾರೆ. ಜೆಡಿಎಸ್ ಕಾರ್ಯಕರ್ತರು, ಮುಖಂಡರು ಒಗ್ಗಾಟ್ಟಾಗಿ ಹೋಗುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

Exit mobile version