Wednesday, August 27, 2025
Google search engine
HomeUncategorizedನಳಿನ್ ಕುಮಾರ್,ತಾಯಿ ಶೋಭಾ ಕರಂದ್ಲಾಜೆ ರಾಜ್ಯದ ಪರವಾಗಿ ಸದನದಲ್ಲಿ ಒಂದೇ ಒಂದು ಮಾತಾಡಿದ್ದೀಯೇನಮ್ಮಾ?

ನಳಿನ್ ಕುಮಾರ್,ತಾಯಿ ಶೋಭಾ ಕರಂದ್ಲಾಜೆ ರಾಜ್ಯದ ಪರವಾಗಿ ಸದನದಲ್ಲಿ ಒಂದೇ ಒಂದು ಮಾತಾಡಿದ್ದೀಯೇನಮ್ಮಾ?

ಮಂಗಳೂರು : ನಿಮ್ಮನ್ನು ಮಂಗಳೂರು, ಉಡುಪಿ ಜನ ಯಾಕೆ ಗೆಲ್ಲಿಸಬೇಕು ಕಟೀಲ್ ಅವರೇ, ಕರಂದ್ಲಾಜೆ ಅವರೇ, ಬನ್ನಿ ಜಿಲ್ಲೆಯ ಸ್ವಾಭಿಮಾನಿ ಜನತೆಗೆ ಉತ್ತರ ಕೊಡಿ ಎಂದು ಸಿಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಳಿನ್ ಕುಮಾರ್ ಕಟೀಲ್ ಅವರೇ ಒಂದೇ ಒಂದು ದಿನ ರಾಜ್ಯದ ಪರವಾಗಿ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿದಿಯೇನಪ್ಪಾ? ತಾಯಿ ಶೋಭಾ ಕರಂದ್ಲಾಜೆ ನೀನಾದ್ರೂ ರಾಜ್ಯದ ಪರವಾಗಿ ಒಂದೇ ಒಂದು ಮಾತಾಡಿದ್ದೀಯೇನಮ್ಮಾ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ನಿಮ್ಮನ್ನು ಮಂಗಳೂರು, ಉಡುಪಿ ಜಿಲ್ಲೆಯ ಸ್ವಾಭಿಮಾನಿ ಜನತೆ ಏಕೆ ಗೆಲ್ಲಿಸಬೇಕು ಎಂದು ಕೇಳಿದರು.

ಇದನ್ನೂ ಓದಿ: 58ನೇ ಜ್ಞಾನಪೀಠ ಪ್ರಶಸ್ತಿ ಪ್ರಕಟ: ಕವಿ ಗುಲ್ಜಾರ್ ಹಾಗು ರಾಮಭದ್ರಾಚಾರ್ಯಗೆ ಪ್ರಶಸ್ತಿ!

ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ. ಮೋದಿಯವರು ಇದುವರೆಗೂ ಹೇಳಿದ್ದರಲ್ಲಿ ಯಾವುದನ್ನಾದರೂ ಈಡೇರಿಸಿದ್ದಾರಾ? ಜನರ ಬದುಕಿಗೆ ನೆರವಾಗುವ, ದೇಶದ ಮಕ್ಕಳು-ಯುವಜನರ ಬದುಕು-ಭವಿಷ್ಯಕ್ಕೆ ಅನುಕೂಲ ಆಗುವ ಒಂದೇ ಒಂದನ್ನಾದರೂ ಈಡೇರಿಸಿದ್ದಾರಾ? ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಜನಸ್ತೋಮದ ಎದುರು ಪ್ರಶ್ನಿಸಿದರು.

ದಕ್ಷಿಣಕನ್ನಡದ ಜನತೆಗೆ ರಾಜಕೀಯ ಪ್ರಜ್ಞಾವಂತಿಕೆ ಹೆಚ್ಚಾಗಿದೆ. ಸತ್ಯ ಹೇಳುವವರು ಮತ್ತು ಸುಳ್ಳು ಹೇಳುವವರು ಯಾರು ಎನ್ನುವುದನ್ನು ಅರ್ಥ ಮಾಡಿಕೊಳ್ಳುವ ಪ್ರಜ್ಞಾವಂತಿಕೆಯೂ ಇದೆ. ಈ ಕಾರಣಕ್ಕೆ ಮಂಗಳೂರಿನಲ್ಲೇ ಮೊದಲ ಸಭೆ ಮಾಡುವ ಮೂಲಕ ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸಿದ್ದೇವೆ ಎಂದರು.‌

ಜಾತಿ-ಜಾತಿಗಳ ಮಧ್ಯೆ, ಧರ್ಮ-ಧರ್ಮಗಳ ಮಧ್ಯೆ ಕಿತ್ತಾಟ, ಜಗಳ ತಂದಿಟ್ಟಿರುವುದು ಬಿಟ್ಟರೆ ಜನ ಸಾಮಾನ್ಯರ ಬದುಕಿಗೆ ಅನುಕೂಲ ಆಗುವ ಒಂದೇ ಒಂದು ಕಾರ್ಯಕ್ರಮವನ್ನು ಕಳೆದ ಹತ್ತು ವರ್ಷಗಳಲ್ಲಿ ಜಾರಿ ಆಗಿದೆಯಾ? ಡೀಸೆಲ್-ಪೆಟ್ರೋಲ್ ಬೆಲೆ ಕಡಿಮೆ ಆಯ್ತಾ? ಅಡುಗೆ ಗ್ಯಾಸ್ ಬೆಲೆ ಕಡಿಮೆ ಆಗಿದೆಯಾ? ಕಪ್ಪು ಹಣ ವಾಪಾಸ್ ಬಂದಿದೆಯಾ? ಅಚ್ಛೆ ದಿನ್ ಯಾರಿಗಾದರೂ ಬಂದಿದೆಯಾ? ಪ್ರಶ್ನಿಸಿದರು.

ಬಡವರು, ಮಧ್ಯಮ ವರ್ಗದವರಿಗೆ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿ ಮಾಡಿದ ಬಳಿಕವೂ ರಾಜ್ಯದ ಆರ್ಥಿಕತೆಯನ್ನು ಸದೃಡವಾಗಿ ಪ್ರಗತಿ ಪಥದಲ್ಲಿ ಮುನ್ನಡೆಸುತ್ತಿದ್ದೇವೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.

ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗಿಬಿಡುತ್ತದೆ ಎಂದಿದ್ದ ಮೋದಿಯವರೇ ಈಗ ನಮ್ಮ ಗ್ಯಾರಂಟಿಯನ್ನು ಕದ್ದು ಈಗ “ಮೋದಿ ಗ್ಯಾರಂಟಿ-ಮೋದಿ ಗ್ಯಾರಂಟಿ” ಎಂದು ಭಜನೆ ಆರಂಭಿಸಿದ್ದಾರೆ ಎಂದು ಸಿಎಂ ವ್ಯಂಗ್ಯವಾಡಿದರು.

ನಮ್ಮ ಗ್ಯಾರಂಟಿ ಪಡೆಯುವ ಫಲಾನುಭವಿಗಳನ್ನು ಅವಮಾನಿಸಬೇಡಿ ಎಂದರು.

ಈ ಕಾರ್ಯಕ್ರಮದಲ್ಲಿ AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, KPCC ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, AICC ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್, ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಸಚಿವರಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಕೆ.ವೆಂಕಟೇಶ್, ನಾಗೇಂದ್ರ, ಬೈರತಿ ಸುರೇಶ್, ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಮುಖ್ಯಮಂತ್ರಿ ವೀರಪ್ಪಮೋಯ್ಲಿ, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಮೋಟಮ್ಮ, ಆರ್.ವಿ.ದೇಶಪಾಂಡೆ, ಕಿಮ್ಮನೆ ರತ್ನಾಕರ್, ರಮಾನಾಥ ರೈ, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಬಂಡಾರಿ, ಕೆಪಿಸಿಸಿ ಸಂವಹನ ವಿಭಾಗದ ಲಾವಣ್ಯ ಬಲ್ಲಾಳ್ ಸೇರಿ ಹಲವು ಮುಖಂಡರು ವೇದಿಕೆಯಲ್ಲಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments