Site icon PowerTV

ನಾನು ಲೋಕಸಭೆಗೆ ಸ್ಪರ್ಧಿಸುವುದಿಲ್ಲ: ಸಚಿವ ಹೆಚ್.ಸಿ.ಮಹದೇವಪ್ಪ ಸ್ಪಷ್ಟನೆ

ಬೆಂಗಳೂರು: ನಾನು ಲೋಕಸಭೆ ಚುನಾವಣೆಗೆ ನಿಲ್ಲೋದಿಲ್ಲ ಎಂದು ಸಚಿವ ಹೆಚ್.ಸಿ.ಮಹದೇವಪ್ಪ ಸ್ಪಷ್ಟಪಡಿಸಿದರು.

ವಿಧಾನಸೌಧದಲ್ಲಿ ನಡೆದ ಭಾರತ ಸಂವಿಧಾನ ಹಾಗೂ ಐಕ್ಯತಾ ಸಮಾವೇಶಕ್ಕೆ ಸಂಬಂಧಿಸಿದಂತೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಚಾಮರಾಜನಗರ ಕ್ಷೇತ್ರ ಟಿಕೆಟ್ ಆಕಾಂಕ್ಷಿ ಅಲ್ಲ. ನಾನು ಸ್ಪರ್ಧೆ ಮಾಡಲ್ಲ, ಟಿಕೆಟ್ ಕೇಳಿಲ್ಲ. ಹೈಕಮಾಂಡ್ ಯಾರನ್ನೇ ನಿಲ್ಲಿಸಿದರೂ ಬೆಂಬಲ ನೀಡುತ್ತೇನೆ. ಸುನೀಲ್ ಬೋಸ್‌ಗೆ ಕೊಡಿ ಎಂದು ಕ್ಷೇತ್ರದ ಶಾಸಕರು, ಮುಖಂಡರು ಹೇಳ್ತಿದ್ದಾರೆ.

ಇದನ್ನೂ ಓದಿ: ಪಟಾಕಿ ಕಾರ್ಖಾನೆ ಸ್ಫೋಟ; 9 ಮಂದಿ ಸಾವು

ಸುನೀಲ್ ಬೋಸ್ ಹೆಸರೂ ಕೂಡಾ ಪ್ಯಾನೆಲ್‌ನಲ್ಲಿದೆ ಎಂದು ಚಾಮರಾಜನಗರದಲ್ಲಿ ಪುತ್ರನ ಸ್ಪರ್ಧೆಯ ಸುಳಿವು ಕೊಟ್ಟಿದ್ದಾರೆ.

ಅನಗತ್ಯ ಗೊಂದಲ ಬೇಡ, ನಾನು ಲೋಕಸಭೆಗೆ ನಿಲ್ಲೋದಿಲ್ಲ.

ಅನಗತ್ಯ ಗೊಂದಲ ಬೇಡ, ನಾನು ಲೋಕಸಭೆಗೆ ನಿಲ್ಲೋದಿಲ್ಲ. ನಲವತ್ತು ವರ್ಷಗಳಾಯ್ತು ನಾನು ರಾಜಕೀಯಕ್ಕೆ ಬಂದು. ಸರ್ವೆ ಮಾಡಿಸಿಕೊಂಡು ಹೆಸರು ಬರೋ ಹಾಗೆ ಮಾಡ್ಕೋಬೇಕಾ ನಾನು? ಚಾಮರಾಜನಗರ ಕಾಂಗ್ರೆಸ್‌ನ ಭದ್ರಕೋಟೆ. ಎದುರಾಳಿಗಳು ಯಾರೇ ನಿಂತರೂ ಕಾಂಗ್ರೆಸ್ ಗೆಲ್ಲುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Exit mobile version