Site icon PowerTV

ಲಾರಿ ನಡುವೆ ಟಿಟಿ ಭೀಕರ ಅಪಘಾತ: ಮೂವರ ದುರ್ಮರಣ

ರಾಮನಗರ: ಲಾರಿ ಮತ್ತು ಟಿಟಿ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.

ಬೈರಾಪಟ್ಟಣದ ಚಾಮುಂಡೇಶ್ವರಿ ಮೆಡಿಕಲ್ ಕಾಲೇಜು ಬಳಿ ಶನಿವಾರ ಬೆಳಗ್ಗೆ ದುರ್ಘಟನೆ ಸಂಭವಿಸಿದೆ. ಮೈಸೂರು‌ ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ಟಿಟಿ ವಾಹನ ನಡುವೆ ಢಿಕ್ಕಿಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಸೋಮಲಿಂಗಪ್ಪ (70), ಶಿವಲಿಂಗಪ್ಪ (66), ರಾಜೇಶ್ವರಿ ಎಂದು ಗುರುತಿಸಲಾಗಿದೆ.

ದುರ್ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ. ಮೂವರು ಗಾಯಾಳುಗಳನ್ನು ಚನ್ನಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ, ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Exit mobile version