Site icon PowerTV

ವಾಕ್ ಸ್ವಾತಂತ್ರ್ಯ ದುರ್ಬಳಕೆಯಲ್ಲಿ ಬಿಜೆಪಿಯೇ ನಂ.1: ಸಚಿವ ಸಂತೋಷ ಲಾಡ್

ಧಾರವಾಡ: ವಾಕ್ ಸ್ವಾತಂತ್ರ್ಯ ದುರ್ಬಳಕೆಯಲ್ಲಿ ಬಿಜೆಪಿಯೇ ನಂಬರ್​ ಒನ್​ ಎಂದು ಸಚಿವ ಸಂತೋಷ ಲಾಡ್ ಹೇಳಿದ್ದಾರೆ.

ಧಾರವಾಡದ ನವಲಗುಂದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನದ ಮೂಲಕ ಅಂಬೇಡ್ಕರ್ ವಾಕ್‌ ಸ್ವಾತಂತ್ರ್ಯ ಕೊಟ್ಟಿದ್ದಾರೆ. ಆದರೆ, ವಾಕ್‌ ಸ್ವಾತಂತ್ರ್ಯವನ್ನು ದುರ್ಬಳಕೆ ಮಾಡುವುದರಲ್ಲಿ ಬಿಜೆಪಿಯೇ ನಂಬರ್ ಒನ್ ಸ್ಥಾನದಲ್ಲಿದೆ. ಬಿಜೆಪಿಗರು ಎಲ್ಲಿ ಏನು ಬೇಕಾದರೂ ಮಾತನಾಡುತ್ತಾರೆ ಎಂದು ಬಿಜೆಪಿ ವಿರುದ್ಧ ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದ್ದಾರೆ.

ಎಲ್ಲದಕ್ಕೂ ಒಂದು ಮಿತಿ ಇರುತ್ತದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400 ಸ್ಥಾನಗಳನ್ನು ಗೆಲ್ಲುತ್ತದೆ ಎನ್ನುತ್ತಿದ್ದಾರೆ. ಎನ್‌ಡಿಎ ಈಗ 300 ಸ್ಥಾನ ಗೆಲ್ಲೋದಕ್ಕೂ ಆಗಲ್ಲ. ಅವರು ಹೇಳಿದ್ದನ್ನೆಲ್ಲ ಮಾಧ್ಯಮಗಳು ತೋರಿಸುತ್ತವೆ. ನಾವು ಅವರಂತೆ ಮಾತನಾಡುವುದಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್‌ ಕನಿಷ್ಠ 18 ಸ್ಥಾನ ಗೆಲ್ಲುತ್ತದೆ ಎಂದು ಹೇಳಿದರು.

Exit mobile version