Site icon PowerTV

ರಶ್ಮಿಕಾ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ ! ಸಾವಿನಿಂದ ಪಾರಾದ ನಟಿ

ಮುಂಬೈ: ನಟಿ ರಶ್ಮಿಕಾ ಮಂದಣ್ಣ ಸಂಚರಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶ ಮಾಡಿದ್ದು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದ್ದು ಈ ಕುರಿತು ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಈ ಅನುಭವವನ್ನು ಹಂಚಿಕೊಂಡ ಅವರು, ʼʼಇಂದು ಸಾವಿನಿಂದ ತಪ್ಪಿಸಿಕೊಂಡಿದ್ದೇವೆʼʼ ಎಂದು ಬರೆದುಕೊಂಡಿದ್ದಾರೆ. ರಶ್ಮಿಕಾ ಜತೆ ಈ ವೇಳೆ ನಟಿ ಶ್ರದ್ಧಾ ದಾಸ್ ಕೂಡ ಇದ್ದರು.

ಇದನ್ನೂ ಓದಿ: ಪೊಲೀಸ್​ ಕಾನ್ಸ್​ಟೇಬಲ್​ ಹುದ್ದೆಗೆ ಅರ್ಜಿ ಸಲ್ಲಿಸಿದ ಮಾದಕ ನಟಿ ಸನ್ನಿ ಲಿಯೋನ್​!

ಶನಿವಾರ ರಶ್ಮಿಕಾ ಸಂಚರಿಸುತ್ತಿದ್ದ ಏರ್‌ ವಿಸ್ತಾರ ವಿಮಾನವು ಮುಂಬೈಯಿಂದ ಹೈದರಾಬಾದ್‌ಗೆ ಪ್ರಯಾಣಿಸುತ್ತಿತ್ತು. ಮುಂಬೈ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ಹೊತ್ತಿನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ 30 ನಿಮಿಷಗಳ ನಂತರ ವಿಮಾನ ಮತ್ತೆ ಮುಂಬೈಗೆ ಮರಳಿತ್ತು. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.

ಘಟನೆಯ ಬಗ್ಗೆ ರಶ್ಮಿಕಾ ಹಂಚಿಕೊಂಡ ಪೋಸ್ಟ್‌ ಕ್ಷಣಾರ್ಧದಲ್ಲಿ ವೈರಲ್‌ ಆಗಿತ್ತು. ನಟಿಯ ಸುರಕ್ಷಯೆ ಬಗ್ಗೆ ಅನೇಕ ಅಭಿಮಾನಿಗಳು ಕಳವಳ ವ್ಯಕ್ತಪಡಿಸಿದ್ದರು. ಸದ್ಯ ತಮ್ಮ ನೆಚ್ಚಿನ ನಟಿ ಸುರಕ್ಷಿತವಾಗಿರುವುದನ್ನು ತಿಳಿದು ಅವರೆಲ್ಲ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

Exit mobile version