Site icon PowerTV

ಶೀಲ ಶಂಕಿಸಿ ಪತ್ನಿಗೆ ಗುದ್ದಲಿಯಿಂದ ಹೊಡೆದು ಕೊಂದ ಸಂಶಯ ಪಿಶಾಚಿ!

ವಿಜಯಪುರ: ಪತ್ನಿಯ ಶೀಲ ಶಂಕಿಸಿ ಪತಿಯೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ತಿಕೋಟ ತಾ. ಹುಬನೂರು ತಾಂಡಾ -2ರಲ್ಲಿ ಘಟನೆ ನಡೆದಿದೆ.

ರೇಶ್ಮಾ ರಾಠೋಡ (25) ಎಂಬಾಕೆಯನ್ನು ಗುದ್ದಲಿಯಿಂದ ಹೊಡೆದು ಅಶೋಕ ರಾಠೋಡ (33) ಕೊಲೆ ಮಾಡಿದ್ದಾನೆ.

ಅನೈನಿಕ ಸಂಬಂಧ ಎಂದು ಸಂಶಯಪಟ್ಟ ಪತಿ

ರೇಶ್ಮಾ ಹಾಗೂ ಅಶೋಕ್‌ ಮದುವೆಯಾಗಿ 11 ವರ್ಷಗಳೇ ಕಳೆದಿತ್ತು. ದಂಪತಿಗೆ ಮೂವರು ಮಕ್ಕಳು ಸಹ ಇದ್ದರು. ಆದರೆ ಕೆಲ ತಿಂಗಳಿನಿಂದ ಅಶೋಕ್‌, ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಸಂಶಯವನ್ನು ಹೊಂದಿದ್ದ. ಆಗಾಗ ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು.

ಪತ್ನಿ ರೇಶ್ಮಾಳ ಶೀಲ ಶಂಕಿಸುತ್ತಿದ್ದ ಅಶೋಕ, ಕುಡಿದು ಬಂದು ನಿತ್ಯ ಕಿರುಕುಳ ಕೊಡುತ್ತಿದ್ದ. ಈತನ ಕಾಟ ತಾಳಲಾರದೆ ಹುಬನೂರಿನಲ್ಲಿದ್ದ ತನ್ನ ತವರು ಮನೆಗೆ ರೇಶ್ಮಾ ಹೋಗಿದ್ದಳು. ಅಲ್ಲಿಗೆ ಹೋದ ಅಶೋಕ ಮತ್ತೆ ಕ್ಯಾತೆ ತೆಗೆದಿದ್ದಾನೆ. ಮಲಗಿದ್ದವಳ ಮೇಲೆ ಗುದ್ದಲಿಯಿಂದ ಹೊಡೆದು ಕೊಲೆ ಮಾಡಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ದೂರು ದಾಖಲಿಸಿಕೊಂಡಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

 

Exit mobile version