Site icon PowerTV

3 ದಿನ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಹೈ ಅಲರ್ಟ್​

ನವದೆಹಲಿ: ಉತ್ತರ ಭಾರತದ ಹಲವೆಡೆ ಹಿಮಪಾತದ ಜತೆಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದಲ್ಲಿ, ಎತ್ತರದ ಪ್ರದೇಶಗಳಲ್ಲಿ ಭಾರೀ ಹಿಮಪಾತ ಮತ್ತು ಬಯಲು ಸೀಮೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನಗಳ ಕಾಲ ಇದು ಮುಂದುವರೆಯುವ ಸಾಧ್ಯತೆಯಿದೆ. ಸೋಮವಾರದಿಂದ ಪಂಜಾಬ್, ಹರಿಯಾಣ, ದೆಹಲಿ ಸೇರಿದಂತೆ ಬಯಲುಸೀಮೆ ರಾಜ್ಯಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಹವಾಮಾನ ವೈಪರೀತ್ಯದಿಂದ ಕನಿಷ್ಠ ತಾಪಮಾನವೂ ಕುಸಿದಿದೆ.

ಫೆಬ್ರವರಿ 21 ರವರೆಗೆ ಜಮ್ಮು-ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶದಲ್ಲಿ ಹವಾಮಾನವು ಕೆಟ್ಟದಾಗಿರುತ್ತದೆ. ಸೋಮವಾರ ಈ ಪ್ರದೇಶಗಳಲ್ಲಿ ಭಾರೀ ಮಳೆ, ಹಿಮಪಾತ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯನ್ನು ಸೂಚಿಸಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: ಪರ್ಫ್ಯೂಮ್‌ ಗೋಡೌನ್‌ನಲ್ಲಿ ಬೆಂಕಿ; ಗಾಯಾಳುಗಳು ಸಾವು ಬದುಕಿನ ಮಧ್ಯೆ ಹೋರಾಟ

ಕರ್ನಾಟಕದ ವಾತಾವರಣ ಹೇಗಿದೆ?

ರಾಜ್ಯದ ವಿಜಯಪುರದಲ್ಲಿ 15.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಸ್ವಲ್ಪ ಹೊತ್ತು ಮೋಡಕವಿದ ವಾತಾವರಣವಿರಲಿದ್ದು, ಕ್ರಮೇಣ ಶುಭ್ರ ಆಕಾಶವಿರಲಿದೆ. ಎಚ್​ಎಎಲ್​ನಲ್ಲಿ 31.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 31.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.4 1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Exit mobile version