Site icon PowerTV

ಇಬ್ಬರನ್ನೂ ಗುಂಡಿಟ್ಟು ಕೊಲ್ಲಬೇಕು ಎಂದಿದ್ದೆ, ಅದು ಸರಿ ಇದೆ : ಕೆ.ಎಸ್. ಈಶ್ವರಪ್ಪ ಸಮರ್ಥನೆ

ದಾವಣಗೆರೆ : ದೇಶ ವಿಭಜನೆ ಹೇಳಿಕೆ ನೀಡಿದ್ದ ಸಂಸದ ಡಿ.ಕೆ. ಸುರೇಶ್ ಹಾಗೂ ವಿನಯ್ ಕುಲಕರ್ಣಿ ಅವರನ್ನು ಗುಂಡಿಟ್ಟು ಕೊಲ್ಲಬೇಕು ಎಂಬ ತಮ್ಮ ವಿವಾದಾತ್ಮಕ ಹೇಳಿಕೆಯನ್ನು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಸಮರ್ಥಿಸಿಕೊಂಡಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿನ್ನಾ ಸಂಸ್ಕೃತಿಯಲ್ಲಿ ದೇಶ ಒಡೆಯುವರನ್ನ ಗುಂಡಿಟ್ಟು ‌ಕೊಲ್ಲಬೇಕು ಎಂದು ಹೇಳಿದ್ದೆ, ಅದು ಸರಿ ಇದೆ ಎಂದು ಹೇಳಿದ್ದಾರೆ.

ನಾನು ಹೇಳಿದ ಹೇಳಿಕೆ ಸರಿ ಇದೆ, ನಾನು ಇದನ್ನು ಸಮರ್ಥಿಸಿಕೊಳ್ಳುತ್ತೇನೆ. ನನ್ನ ಹೇಳಿಕೆಯನ್ನು ಇಡೀ ದೇಶವೇ ಒಪ್ಪಿಕೊಂಡಿದೆ. ಆ ಹೇಳಿಕೆಗೆ ನಾನು ಈಗಲೂ ಬದ್ದ. ಇದಕ್ಕೆ ಕೋರ್ಟ್ ನಲ್ಲಿ ಕೂಡ ಎಫ್​ಐಆರ್​ಗೆ ಸ್ಟೇ ಕೂಡ ತಂದಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? : ಡಿ.ಕೆ ಸುರೇಶ್​ರನ್ನು ಗುಂಡಿಕ್ಕಿ ಕೊಲ್ಲಬೇಕು : ಈಶ್ವರಪ್ಪ ವಿವಾದಾತ್ಮಕ ಹೇಳಿಕೆ 

ಡಿಕೆಶಿ ಇನ್ನೊಮ್ಮೆ ಜೈಲಿಗೆ ಹೋಗುತ್ತಾರೆ

ಇನ್ನೂ ಇದೇ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ ಸೆಟಲ್ಮೆಂಟ್ ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ. ಡಿ.ಕೆ. ಶಿವಕುಮಾರ್ ಅವರಿಗೆ ಈಗಾಗಲೇ ಎರಡು ಬಾರಿ ಸೆಟಲ್ಮೆಂಟ್ ಆಗಿದೆ‌. ಈಗ ಒಮ್ಮೆ ತಿಹಾರ್ ಜೈಲಿಗೆ ಹೋಗಿ ಬಂದಿದ್ದಾರೆ. ಇನ್ನೊಮ್ಮೆ ಜೈಲಿಗೆ ಹೋಗುತ್ತಾರೆ ಎಂದು ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

Exit mobile version