Site icon PowerTV

ರಾಮನಗರದಲ್ಲಿ ವಕೀಲರು v/s ಪೊಲೀಸರ ಸಮರ: ಹೆಚ್ಚಿದ ಪೊಲೀಸ್​ ಬಂದೋಬಸ್ತ್​​!

ರಾಮನಗರ: ವಕೀಕರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿರುವ ಐಜೂರು ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ತನ್ವೀರ್ ಹುಸೇನ್ ಅಮಾನತಿಗೆ ಆಗ್ರಹಿಸಿ, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ವಕೀಲರು ರಾಮನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ತಮ್ಮ ಬೇಡಿಕೆ ಈಡೇರಿಕೆಗಾಗಿ ಜಿಲ್ಲಾ ವಕೀಲರ ಸಂಘದ ಆವರಣದಲ್ಲಿ ಒಂದು ವಾರದಿಂದ ಧರಣಿ ನಡೆಸುತ್ತಿದ್ದ ವಕೀಲರು, ತಮ್ಮ ಬೇಡಿಕೆಗೆ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಹೋರಾಟ ತೀವ್ರಗೊಳಿಸಲು ಮುಂದಾಗಿದ್ದಾರೆ.  ಈ ಹಿನ್ನೆಲೆ ಧರಣಿಯನ್ನು ಸಂಘದ ಆವರಣದಿಂದ ಡಿ.ಸಿ ಕಚೇರಿಗೆ ಸ್ಥಳಾಂತರಿಸಿ, ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಜಿಲ್ಲೆಯ ವಕೀಲರನ್ನು ಬೆಂಬಲಿಸಲು ರಾಜ್ಯದ ವಿವಿಧ ಭಾಗಗಳಿಂದ ವಕೀಲರು ರಾಮನಗರಕ್ಕೆ ಬಂದಿದ್ದಾರೆ.

ಇದನ್ನೂ ಓದಿ: ಸಿನಿಮಾದಲ್ಲಿ ಹಿರೋಯಿನ್​ ಮಾಡುವ ಆಸೆ ತೋರಿಸಿ ಯುವತಿಗೆ ವಂಚನೆ: ದೂರು ದಾಖಲು

ಜಿಲ್ಲೆಯ ಭದ್ರತೆಯ ಹಿತದೃಷ್ಟಿಯಿಂದ ಡಿವೈಎಸ್ಪಿಗಳು, ಇನ್ಸ್‌ಪೆಕ್ಟರ್‌ಗಳು, ಪಿಎಸ್‌ಐಗಳು, ಕಾನ್ಸ್‌ಟೇಬಲ್‌ಗಳು ಸೇರಿದಂತೆ ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಗರದಾದ್ಯಂತ ನಿಯೋಜಿಸಲಾಗಿದೆ. ಧರಣಿ ಮೇಲೆ ನಿಗಾ ಇಡಲು 100 ಬಾಡಿ ಕ್ಯಾಮರಾ, 2 ಡ್ರೋನ್, 40 ಹ್ಯಾಂಡಿಕ್ಯಾಮ್ ಹಾಗೂ ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

Exit mobile version