Site icon PowerTV

ಮಾನನಷ್ಟ ಪ್ರಕರಣ : ನಾಳೆ ನ್ಯಾಯಾಲಯಕ್ಕೆ ರಾಹುಲ್ ಗಾಂಧಿ ಹಾಜರು

ಬೆಂಗಳೂರು : ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ನಾಳೆ ಸುಲ್ತಾನ್‌ಪುರ ಜಿಲ್ಲಾ ಸಿವಿಲ್‌ ನ್ಯಾಯಾಲಯಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಜರಾಗಲಿದ್ದಾರೆ.

ರಾಹುಲ್ ಗಾಂಧಿಗೆ ಸಮನ್ಸ್‌ ಜಾರಿ ಮಾಡಿರುವುದರಿಂದ ನಾಳೆ ‘ಭಾರತ್‌ ಜೋಡೋ ನ್ಯಾಯ್‌ ಯಾತ್ರೆ’ಗೆ ವಿರಾಮ ನೀಡಲಾಗುವುದು ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ತಿಳಿಸಿದ್ದಾರೆ.

ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಭಾರತ್ ಜೋಡೋ ನ್ಯಾಯ್ ಯಾತ್ರೆ 37 ದಿನ ಪೂರೈಸಿದೆ. ನಾಳೆ (ಫೆ.20) ಬೆಳಗ್ಗೆ ಯಾತ್ರೆ ಬ್ರೇಕ್ ತೆಗೆದುಕೊಳ್ಳಲಾಗುವುದು. ಮಧ್ಯಾಹ್ನ 2 ಗಂಟೆಗೆ ಅಮೇಥಿಯ ಫರ್ಸತ್‌ಗಂಜ್‌ನಿಂದ ಮತ್ತೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಏನಿದು ರಾಹುಲ್ ಪ್ರಕರಣ?

ಆಗಸ್ಟ್ 4, 2018 ರಂದು ಬಿಜೆಪಿ ನಾಯಕರೊಬ್ಬರು ದಾಖಲಿಸಿದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 20ರಂದು ಬೆಳಗ್ಗೆ ಸುಲ್ತಾನ್‌ಪುರದ ಜಿಲ್ಲಾ ಸಿವಿಲ್ ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ನೀಡಲಾಗಿದೆ. ಆದ್ದರಿಂದ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಅರ್ಧ ದಿನ ಬ್ರೇಕ್ ನೀಡಲಾಗಿದೆ ಎಂದು ಜೈರಾಮ್‌ ರಮೇಶ್‌ ಹೇಳಿದ್ದಾರೆ.

Exit mobile version