Site icon PowerTV

ಪರೀಕ್ಷೆ ನಡೆಯುತ್ತಿದ್ದ ವೇಳೆಯಲ್ಲಿ 6ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಉಡುಪಿ: ಪರೀಕ್ಷಾ ಭೀತಿಯಿಂದ ವಿದ್ಯಾರ್ಥಿಯೋರ್ವ ಕಟ್ಟಡದ 6ನೇ ಮಹಡಿಯಿಂದ ಜಿಗಿದು ಸಾವಿಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದ ಮಾಹೆ ವಿವಿಯಲ್ಲಿ ನಡೆದಿದೆ.

ಬಿಹಾರ ಮೂಲದ ಸತ್ಯಂ ಸುಮನ್(19) ಮೃತ ವಿದ್ಯಾರ್ಥಿ ಎಂದು ಎಂದು ಗುರುತಿಸಲಾಗಿದೆ. ಎಂಸಿಎಚ್‌ಪಿ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದು, ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿಬಿದ್ದ ಹಿನ್ನಲೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೊಬೈಲ್ ಮೂಲಕ ಕಾಪಿ ಮಾಡುವ ವೇಳೆ ಸತ್ಯಂ ಸುಮನ್ ಸಿಕ್ಕಿಬಿದ್ದಿದ್ದಾನೆ. ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ ಪರೀಕ್ಷಾ ಕೊಠಡಿಯಿಂದ ಆತನನ್ನು ಪರೀಕ್ಷಾ ಉಸ್ತುವಾರಿ ಹೊರದಬ್ಬಿದ್ದಾರೆ. ಇದರಿಂದ ಮನನೊಂದು ಆತ ಪರೀಕ್ಷೆ ನಡೆಯುತ್ತಿದ್ದ ವೇಳೆಯಲ್ಲಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version