Site icon PowerTV

ಅಧಿಕಾರಿಗಳ ಕಿರುಕುಳ.. BMTC ಚಾಲಕನಿಂದ ಆತ್ಮಹತ್ಯೆಗೆ ಯತ್ನ

ಬೆಂಗಳೂರು : ಬಿಎಂಟಿಸಿ ಚಾಲಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಟೋಲ್ ಸಮೀಪ ನಡೆದಿದೆ.

ನಂಜುಂಡಯ್ಯ ಆತ್ಮಹತ್ಯೆಗೆ ಯತ್ನಿಸಿದ ಬಿಎಂಟಿಸಿ ಚಾಲಕನಾಗಿದ್ದಾನೆ. ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಇಂದು ಮಧ್ಯಾಹ್ನ ವಿಷ ಸೇವಿಸಿ ಅತ್ಮಹತ್ಯೆಗೆ ಚಾಲಕ ಯತ್ನಿಸಿದ್ದಾನೆ.

ವಿಷಯ ತಿಳಿದು ಕೂಡಲೇ ಸ್ಥಳಕ್ಕಾಗಮಿಸಿದ ಹೊಸಕೋಟೆ ಪೊಲೀಸರು ಚಾಲಕನನ್ನು ಸಮಾಧಾನಪಡಿಸಿದ್ದಾರೆ. ಬಳಿಕ, ಬಿಎಂಟಿಸಿ ಹಿರಿಯ ಅಧಿಕಾರಿಗಳೊಂದಿಗೆ ಕಳುಹಿಸಿಕೊಟ್ಟಿದ್ದಾರೆ.

Exit mobile version