Saturday, August 23, 2025
Google search engine
HomeUncategorizedPUC ಮತ್ತು SSLC ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ!

PUC ಮತ್ತು SSLC ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ!

ಬೆಂಗಳೂರು : ರಾಜ್ಯದಲ್ಲಿ 2024-25ನೇ ಸಾಲಿನ ಎಸ್​ಎಸ್​ಎಲ್​ಸಿ ಹಾಗು ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದ್ದಾರೆ.

ಇಂದು ವಿಕಾಸಸೌಧದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಪರೀಕ್ಷಾ ದಿನಾಂಕ ಹಾಗೂ ಪರೀಕ್ಷೆಗಳಿಗೆ ಸಂಬಂಧಪಟ್ಟ ಇತರ ಮಾಹಿತಿಗಳನ್ನು ನೀಡಿದರು.

ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್​ 01 ರಿಂದ 22ರ ವರೆಗೆ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮಾರ್ಚ್​​ 25 ರಿಂದ ಏಪ್ರಿಲ್ 06ರವರೆಗೆ ನಡೆಯಲಿವೆ ಎಂದು ತಿಳಿಸಿದರು. ಈ ಶೈಕ್ಷಣಿಕ ವರ್ಷದ ಸಾಲಿನಲ್ಲಿ ರಾಜ್ಯದಲ್ಲಿ 8,96,271 ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯತ್ತಿದ್ದಾರೆ. 2,741 ಪರೀಕ್ಷಾ ಕೇಂದ್ರಗಳಿವೆ. ಇನ್ನು 6,98, 624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ.

ಇದನ್ನೂ ಓದಿ: PUC ಮತ್ತು SSLC ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ!

ಇನ್ನು, ಕಳೆದ ವರ್ಷದಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ಇನ್ನುಳಿದಂತೆ ಪರೀಕ್ಷೆಯಲ್ಲಿ ತೇರ್ಗಡೆಯಾಗದ ವಿದ್ಯಾರ್ಥಿಗಳಿಗೆ ಪುನರಾವರ್ತಿತ ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನು ಹಾಗೂ ಎಸ್ ಎಸ್ಎಲ್​ಸಿ ಪರೀಕ್ಷೆ-2 ನ್ನು ಎಪ್ರಿಲ್ ಕೊನೆಯ ವಾರದಲ್ಲಿ ನಡೆಸುತ್ತೇವೆ ಎಂದರು.

ಪಿಯುಸಿ ಹಾಗೂ ಎಸ್ಎಸ್ಎಲ್ ಸಿ ಪರೀಕ್ಷೆಗೆ ಹಿಜಾಬ್ ಅವಕಾಶ ವಿಚಾರವಾಗಿ ಮಾತನಾಡಿದ ಅವರು, ನ್ಯಾಯಾಲಯದ ನಿರ್ದೇಶನದಂತೆ ಸಮವಸ್ತ್ರ ನಿಯಮ ಪಾಲನೆ ಮಾಡಲಾಗುತ್ತದೆ. ಅಡ್ವಕೇಟ್ ಜನರಲ್ ಅವರ ಸಲಹೆ ಪಡೆದು ಹಿಜಾಬ್ ವಿಚಾರ ನಿರ್ಧರಿಸಲಾಗುತ್ತದೆ ಎಂದು ಅವರು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments