Site icon PowerTV

ನಾಳೆಯಿಂದ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ನಾಳೆಯಿಂದ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ರಾಜ್ಯ ಸರ್ಕಾರವು 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡಲು ನಿರ್ಧರಿಸಿದೆ. ನಾಳೆ ಬೆಂಗಳೂರಿನಲ್ಲಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ‌ ಹೇಳಿದರು.

ಕೈ ಮುಗಿದು ಒಳಗೆ ಬಾ ಘೋಷವಾಕ್ಯ ಬದಲಾವಣೆಗೆ ಸರ್ಕಾರ ಆದೇಶ ಮಾಡಿಲ್ಲ

ಅದಕ್ಕೂ ವಿರೋಧ ಮಾಡಿದ್ರು. ನಮ್ಮ ರಾಜ್ಯದ ರೋಗಿಗಳು ಆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ ಅಂದಿದ್ದರು. ಅದೇ ರೀತಿ ಆನೆ ತುಳಿದು ಮೃತಪಟ್ಟಿದ್ದಕ್ಕೆ ಪರಿಹಾರ ಕೊಟ್ಟಿದ್ದಾರೆ. ಬಿಜೆಪಿಯವರಿಗೆ ಯಾವುದೇ ಕೆಲಸ ಇಲ್ಲ. ಅದಕ್ಕೆ ಇಂತಹ ಕೆಲಸ ಮಾಡ್ತಾರೆ. ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ ಘೋಷವಾಕ್ಯ ಬದಲಾವಣೆಗೆ ಸರ್ಕಾರ ಯಾವುದೇ ಆದೇಶ ಮಾಡಿರಲಿಲ್ಲ. ಯಾವುದೋ ವಾಟ್ಸಾಪ್ ನಲ್ಲಿ ಬಂದ ಮೆಸೇಜ್​ನಿಂದ ಗೊಂದಲವಾಗಿದೆ ಎಂದರು.

Exit mobile version