Site icon PowerTV

ಮಂಡ್ಯ ಜನರ ಋಣ ನನ್ನ ಮೇಲಿದೆ, ಮಂಡ್ಯ ಬಿಟ್ಟು ನಾನು ಎಲ್ಲೂ ಹೋಗಲ್ಲ : ಸುಮಲತಾ

ಮಂಡ್ಯ : ಮಂಡ್ಯ ಲೋಕಸಭಾ ಚುನಾವಣಾ ಅಖಾಡ ರಂಗೇರುತ್ತಿದೆ. ಟಿಕೆಟ್​ಗಾಗಿ ಅಭ್ಯರ್ಥಿಗಳು ಇನ್ನಿಲ್ಲದ ಕಸರತ್ತು ನಡೆಸ್ತಿದ್ದಾರೆ. ಈ ಬಾರಿ ಬಿಜೆಪಿ ಹಾಗೂ ಜೆಡಿಎಸ್​​ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆ ಮಂಡ್ಯ ಟಿಕೆಟ್​ ಯಾರಿಗೆ ಎಂಬ ಪ್ರಶ್ನೆ ಎದ್ದಿದೆ. ಈ ನಡುವೆ ಮಂಡ್ಯ ಬಿಟ್ಟು ಎಲ್ಲೂ ಹೋಗಲ್ಲ ಅಂತ ಸುಮಲತಾ ಹೇಳಿದ್ದು, ಬಿಜೆಪಿ ವರಿಷ್ಠರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಈ ಬಾರಿ ಬಿಜೆಪಿ ಹಾಗೂ ಜೆಡಿಎಸ್​​​ ಮೈತ್ರಿ ಮಾಡಿಕೊಂಡಿದೆ. ಕಳೆದ ಬಾರಿ ಪಕ್ಷೇತರವಾಗಿ ಸ್ಪರ್ಧೆ ಮಾಡಿ ಮಂಡ್ಯದಿಂದ ಸಂಸದೆಯಾಗಿ ಆಯ್ಕೆಯಾಗಿರುವ ಸುಮಲತಾ ಅಂಬರೀಶ್​​​​​ ಈ ಬಾರಿ ಬಿಜೆಪಿಯಿಂದ ಟಿಕೆಟ್​ ಸಿಗುವ ನಿರೀಕ್ಷೆಯಲ್ಲಿದ್ದಾರೆ.

ಆದರೆ, ಮಂಡ್ಯ ಕ್ಷೇತ್ರ ಜೆಡಿಎಸ್​ಗೆ ಬೇಕೆಂದು ದಳಪತಿ ದಾಳ ಉರುಳಿಸಿದ್ದಾರೆ. ಈ ಹಿನ್ನೆಲೆ ಮಂಡ್ಯ ಕ್ಷೇತ್ರ ಟಿಕೆಟ್ ಸುಮಲತಾ ಅಂಬರೀಶ್​​​​ ಕೈ ತಪ್ಪುವ ಸಾಧ್ಯತೆ ಹೆಚ್ಚಿದೆ. ಆದರೆ, ಇದೀಗ ಸುಮಲತಾ, ಮಂಡ್ಯ ಬಿಟ್ಟು ಎಲ್ಲಿಗೂ ಹೋಗಲ್ಲ ಎಂದಿದ್ದಾರೆ.

ನಾನು ಮಂಡ್ಯ ಬಿಟ್ಟು ಎಲ್ಲೂ ಹೋಗಲ್ಲ

ಮಂಡ್ಯದಲ್ಲಿ ಮಾತನಾಡಿದ ಅವರು, ಸುಮಲತಾ ಅಂಬರೀಶ್ ಮುಂದಿನ ಲೋಕಸಭಾ ಚುನಾವಣೆ ಬಗ್ಗೆ ಒಂದಷ್ಟು ಮಾಹಿತಿ ಬಿಚ್ಚಿಟ್ಟರು. ಲೋಕಾಸಭಾ ಚುನಾವಣೆಯ ನಿಲುವನ್ನು ನಾನಾಗಲೇ ತಿಳಿಸಿದ್ದೇನೆ. ಇನ್ನು ಮಂಡ್ಯ ಜಿಲ್ಲೆಯ ಜನರ ಋಣ ನನ್ನ ಮೇಲಿದೆ. ನಾನು ಮಂಡ್ಯ ಬಿಟ್ಟು ಎಲ್ಲೂ ಹೋಗಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ.

ಚಲುವರಾಯಸ್ವಾಮಿ ಹೇಳಿಕೆಗೆ ಟಾಂಗ್

ಇನ್ನು ಸಚಿವ ಎನ್. ಚಲುವರಾಯಸ್ವಾಮಿ ಹೇಳಿಕೆಗೆ ಟಾಂಗ್ ಕೊಟ್ಟ ಸಂಸದೆ ಸುಮಲತಾ, ನಾಟಿ ಅನ್ನೋ ಪದ ಬಳಸುವಾಗ ಎಚ್ಚರಿಕೆಯಿಂದ ಬಳಸಬೇಕು. ನಾಟಿ ಅನ್ನೋದನ್ನ ಅವರ ಅಡುಗೆ ಮನೆಯಲ್ಲಿ ಇಟ್ಟುಕೊಳ್ಳಲಿ ಎಂದು ಕುಟುಕಿದ್ದಾರೆ.

ಇನ್ನು ಮಂಡ್ಯ ಕ್ಷೇತ್ರದ ಬಗ್ಗೆ ಸಂಸದೆ ಸುಮಲತಾ ಅವರ ನಡೆ ಈವರೆಗೂ ನಿಗೂಢವಾಗಿತ್ತು. ಆದ್ರೆ, ಪ್ರಧಾನಿ ಮೋದಿ, ಜೆ.ಪಿ. ನಡ್ಡಾ ಅವರನ್ನ ಭೇಟಿ ಮಾಡಿ ಬಂದಿರೋ ಸಂಸದೆ ಈಗ ಮಂಡ್ಯ ಬಿಟ್ಟು ಎಲ್ಲೂ ಹೋಗಲ್ಲ ಅಂತೇಳೋ ಮೂಲಕ ಬಿಜೆಪಿ ನಾಯಕರಿಗೆ ಸಂದೇಶ ರವಾನಿಸಿದ್ದಾರೆ.

Exit mobile version