Saturday, August 23, 2025
Google search engine
HomeUncategorizedಸುಪ್ರೀಂ ಕೋರ್ಟ್‌ ಖ್ಯಾತ ವಕೀಲ ಫಾಲಿ ನಾರಿಮನ್ ಇನ್ನಿಲ್ಲ

ಸುಪ್ರೀಂ ಕೋರ್ಟ್‌ ಖ್ಯಾತ ವಕೀಲ ಫಾಲಿ ನಾರಿಮನ್ ಇನ್ನಿಲ್ಲ

ನವದೆಹಲಿ: ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ, ಮಾಜಿ ಸಾಲಿಸಿಟರ್‌ ಜನರಲ್‌ ಫಾಲಿ ಎಸ್ ನಾರಿಮನ್ (95) ಅವರು ಬುಧವಾರ ಬೆಳಗ್ಗೆ ನವದೆಹಲಿಯಲ್ಲಿ ನಿಧನರಾದರು.

ನವೆಂಬರ್ 1950 ರಲ್ಲಿ ಬಾಂಬೆ ಹೈಕೋರ್ಟ್‌ನ ವಕೀಲರಾಗಿ ವೃತ್ತಿ ಆರಂಭಿಸಿದ್ದ ನಾರಿಮನ್ ಇವರು 1961 ರಲ್ಲಿ ಹಿರಿಯ ವಕೀಲರಾಗಿ ನೇಮಕಗೊಂಡರು. ಅವರು 70 ವರ್ಷಗಳಿಗೂ ಹೆಚ್ಚು ಕಾಲ ಕಾನೂನು ಅಭ್ಯಾಸ ಮಾಡಿದ್ದಾರೆ.

ಆರಂಭದಲ್ಲಿ ಬಾಂಬೆ ಹೈಕೋರ್ಟ್‌ನಲ್ಲಿ ಮತ್ತು 1972ರಿಂದ ದೆಹಲಿಯಲ್ಲಿ ಸುಪ್ರೀಂಕೋರ್ಟ್‌ನಲ್ಲಿ ವಕೀಲ ವೃತ್ತಿ ಆರಂಭಿಸಿದ್ದರು. ಮುಂಬೈಯಿಂದ 1972ರ ಮೇನಲ್ಲಿ ದೆಹಲಿಗೆ ಸ್ಥಳಾಂತರಗೊಂಡ ಬಳಿಕ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ನೇಮಕಗೊಂಡರು.

ಕಾವೇರಿ ಜಲವಿವಾದ ಸಂದರ್ಭದಲ್ಲಿ ಕರ್ನಾಟಕದ ಪರ ವಾದ ಮಂಡಿಸುತ್ತಿದ್ದ ಇವರಿಗೆ 1991 ರಲ್ಲಿ ಪದ್ಮಭೂಷಣ ಮತ್ತು 2007 ರಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.

ಕೃಷ್ಣಾ, ಕಾವೇರಿ, ಮಹದಾಯಿ ಸೇರಿದಂತೆ ಅಂತಾರಾಜ್ಯ ನದಿ ನೀರು ಹಂಚಿಕೆಯ ಎಲ್ಲ ವ್ಯಾಜ್ಯಗಳಲ್ಲಿ ರಾಜ್ಯದ ಪರ ವಾದಿಸುತ್ತಿದ್ದ ಇವರಿಗೆ ಅಂತಾರಾಷ್ಟ್ರೀಯ ಜಲತಜ್ಞರೆಂಬ ಖ್ಯಾತಿಯೂ ಬಂದಿತ್ತು.

ನಾರಿಮನ್ ಅವರು 1991 ರಿಂದ 2010 ರವರೆಗೆ ಬಾರ್ ಅಸೋಸಿಯೇಶನ್ ಆಫ್ ಇಂಡಿಯಾದ ಅಧ್ಯಕ್ಷರಾಗಿದ್ದರು. 1989 ರಿಂದ 2005 ರವರೆಗೆ ICC (ಇಂಟರ್ನ್ಯಾಷನಲ್ ಚೇಂಬರ್ ಆಫ್ ಕಾಮರ್ಸ್) ಪ್ಯಾರಿಸ್‌ನ ಇಂಟರ್ನ್ಯಾಷನಲ್ ಕೋರ್ಟ್ ಆಫ್ ಆರ್ಬಿಟ್ರೇಶನ್‌ನ ಉಪಾಧ್ಯಕ್ಷರಾಗಿದ್ದರು ಮತ್ತು ಇಂಟರ್ನ್ಯಾಷನಲ್ ಕೌನ್ಸಿಲ್ ಫಾರ್ ಕಮರ್ಷಿಯಲ್ ಆರ್ಬಿಟ್ರೇಶನ್‌ನ ಅಧ್ಯಕ್ಷರಾಗಿದ್ದರು. 1995 ರಿಂದ 1997 ರವರೆಗೆ ಜಿನೀವಾದಲ್ಲಿ ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗದ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾಗಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments