Site icon PowerTV

ದರ್ಶನ್ ವಿರುದ್ಧ ಒಕ್ಕಲಿಗ ಗೌಡ್ತಿಯರಿಂದ ಮಹಿಳಾ ಆಯೋಗಕ್ಕೆ ದೂರು!

ಬೆಂಗಳೂರು: ನಟ ದರ್ಶನ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದಾರೆ ಎಂಬ ಆರೋಪದಡಿ ಮಹಿಳಾ ಆಯೋಗಕ್ಕೆ ದರ್ಶನ್ ವಿರುದ್ಧ ದೂರು ಸಲ್ಲಿಸಲಾಗಿದೆ.

ಇದನ್ನೂ ಓದಿ: ಭ್ರಷ್ಟಾಚಾರ ಹಿನ್ನೆಲೆ ರಾಜ್ಯಪಾಲರ ಮನೆ ಮೇಲೆ ಸಿಬಿಐ ದಾಳಿ!

ಜಯಶ್ರೀ ಎನ್ನುವವರು ದರ್ಶನ್ ವಿರುದ್ಧ ಲಿಖಿತ ರೂಪದಲ್ಲಿ ದೂರು ನೀಡಿದ್ದು, ಇವತ್ತು ಇವಳು ಇರುತ್ತಾಳೆ, ನಾಳೆ ಅವಳು ಬರ್ತಾಳೆ ಎನ್ನುವ ಮಾತುಗಳನ್ನು ಮೊನ್ನೆ ಶ್ರೀರಂಗಪಟ್ಟಣದಲ್ಲಿ ನಡೆದ ಬೆಳ್ಳಿಪರ್ವದಲ್ಲಿ ದರ್ಶನ್ ಹೇಳಿದ್ದರು. ಹೆಣ್ಣಿನ ಬಗ್ಗೆ ಅವಹೇಳನಕಾರಿಯಾಗಿ ದರ್ಶನ್ ಮಾತನಾಡಿದ್ದಾರೆ ಎಂದು ಆರೋಪಿಸಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ದರ್ಶನ್ ಹೇಳಿಕೆಗೆ ಒಕ್ಕಲಿಗ ಗೌಡತಿಯರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಹೆಣ್ಣು ಮಕ್ಕಳಿಗೆ ಇದು ಅವಮಾನ ಮಾಡುವಂಥದ್ದು ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.

Exit mobile version