Site icon PowerTV

ದೇವಾಲಯಗಳ ಆದಾಯದ ಮೇಲೆ ಸರ್ಕಾರದ ಕಣ್ಣು: ವಿಜಯೇಂದ್ರ ವಾಗ್ದಾಳಿ!

ಬೆಂಗಳೂರು: ದೇವಸ್ಥನಗಳ ಆದಾಯಕ್ಕೆ ಸರ್ಕಾರದ ಬಿದ್ದರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ .ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಎಕ್ಸ್​ನಲ್ಲಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಸರ್ಕಾರ ಇದೀಗ ತನ್ನ ಬರಿದಾಗಿರುವ ಬೊಕ್ಕಸ ತುಂಬಿಸಿಕೊಳ್ಳಲು ಹಿಂದೂ ದೇವಾಲಯಗಳ ಆದಾಯದ ಮೇಲೂ ವಕ್ರ ದೃಷ್ಟಿ ಬೀರಿದೆ.

ಇದನ್ನೂ ಓದಿ: ಬಿಜೆಪಿ ಪಕ್ಷ ತೊರೆದು ಮರಳಿ ಕಾಂಗ್ರೆಸ್​ಗೆ ಮುದ್ದಹನುಮೇಗೌಡ‌ ಸೇರ್ಪಡೆ

ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆದು ಕೊಂಡಿದೆ. ಇದು ದರಿದ್ರತನವಲ್ಲದೇ ಬೇರೇನೂ ಅಲ್ಲ, ದೇವರ ಹರಿಕೆ ಹಾಗೂ ದೇವಸ್ಥಾನದ ಅಭಿವೃದ್ಧಿಗೆ ಭಕ್ತರು ಸಮರ್ಪಿಸುವ ಕಾಣಿಕೆ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಾಗೂ ಭಕ್ತರಿಗೆ ಅನುಕೂಲ ಕಲ್ಪಿಸುವ ಕಾರ್ಯಕ್ಕೆ ವಿನಿಯೋಗವಾಗಬೇಕೇ ಹೊರತೂ, ಅದು ಬೇರೊಂದು ಕಾರ್ಯಕ್ಕೆ ವಿನಿಯೋಗವಾದರೆ ಜನರ ದೈವ ನಂಬಿಕೆಗಳ ಮೇಲೆ ನಡೆಯುವ ದೌರ್ಜನ್ಯ ಹಾಗೂ ವಂಚನೆಯಾಗುತ್ತದೆ.

ಇತರ ಧರ್ಮಗಳ ಆದಾಯದ ಮೇಲಿಲ್ಲದ ಕಣ್ಣು ಹಿಂದೂ ದೇವಾಲಯಗಳ ಮೇಲೆ ಮಾತ್ರ ಏಕೆ ಎಂಬುದು ಕೋಟಿ ಭಕ್ತರ ಪ್ರಶ್ನೆಯಾಗಿದೆ. ಭಕ್ತರ ಹಣದಲ್ಲಿ ಕಾಂಗ್ರೆಸ್ ಸರ್ಕಾರ ಪಾಲು ಕಸಿಯುವ ಬದಲು ‘ಸರ್ಕಾರ ನಡೆಸಲು ನೆರವಾಗಿ’ ಎಂದು ದೇವಸ್ಥಾನಗಳ ಬಳಿ ಗೋಲಕಗಳನ್ನಿಡಲಿ ಸಹಾನುಭೂತಿ ಮನಸ್ಸಿನ ಭಕ್ತರು ನಿಮ್ಮ ಸರ್ಕಾರಕ್ಕೆ ಕಾಣಿಕೆ ನೀಡಲೂ ಬಹುದು? ಎಂದು ಕಿಡಿಕಾರಿದ್ದಾರೆ.

https://twitter.com/BYVijayendra/status/1760332970232303660/photo/1

Exit mobile version