Site icon PowerTV

ದ್ವಿತೀಯ ಪಿಯುಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆ ಗುಡ್​ ನ್ಯೂಸ್​ ನೀಡಿದೆ. 

ಹೌದು,2023-24ನೆ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್‌ 1 ರಿಂದ ಮಾರ್ಚ್‌ 22ರವರೆಗೆ ನಡೆಯಲಿದ್ದು,ವಿದ್ಯಾಥಿಗಳ ಅನುಕೂಲಕ್ಕಾಗಿ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗಿದೆ.ವೋಲ್ವೋ ಎಸಿ ಬಸ್ ಹೊರತುಪಡಿಸಿ KSRTC ಹಾಗೂ BMTC ಬಸ್‍ಗಳಲ್ಲಿ ಹಾಲ್ ಟಿಕೆಟ್ ತೋರಿಸಿ ಮನೆಯಿಂದ ಪರೀಕ್ಷಾ ಕೊಠಡಿವರೆಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ವಿದ್ಯಾರ್ಥಿಗಳ ಅನುಕೂಲಕ್ಕೆ ಪರೀಕ್ಷಾ ಕೇಂದ್ರಗಳ ಮುಂದೆಯೇ ಸ್ಟಾಪ್ ಕೊಡಲು ಚಾಲಕ ಹಾಗೂ ನಿರ್ವಹಕರಿಗೆ ಸೂಚನೆ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳ ರೂಟ್ ನಲ್ಲಿ ಹೆಚ್ಚುವರಿ ಬಸ್ ಬಿಡಲು ಬಿಎಂಟಿಸಿ ಚಿಂತನೆ ನಡೆಸಿದೆ.

Exit mobile version