Wednesday, August 27, 2025
Google search engine
HomeUncategorizedದೇಶದ ಜನತೆಗೆ ಗುಡ್‌ನ್ಯೂಸ್‌; 4ನೇ ಬಾರಿಗೆ LPG ಸಿಲಿಂಡರ್‌ ಬೆಲೆ ಇಳಿಕೆ

ದೇಶದ ಜನತೆಗೆ ಗುಡ್‌ನ್ಯೂಸ್‌; 4ನೇ ಬಾರಿಗೆ LPG ಸಿಲಿಂಡರ್‌ ಬೆಲೆ ಇಳಿಕೆ

ಜುಲೈ ಮೊದಲ ದಿನವೇ ದೇಶದ ಜನತೆಗೆ ಗುಡ್‌ನ್ಯೂಸ್‌ ಸಿಕ್ಕಿದೆ, ಸರ್ಕಾರಿ ತೈಲ ಮತ್ತು ಅನಿಲ ಮಾರುಕಟ್ಟೆ ಕಂಪನಿಗಳು ಸತತ ನಾಲ್ಕನೇ ಬಾರಿಗೆ ಎಲ್‌ಪಿಜಿ ಸಿಲಿಂಡರ್‌ ಬೆಲೆ ಇಳಿಸಿವೆ.

ದೇಶದ ಅತಿದೊಡ್ಡ ತೈಲ ಮಾರುಕಟ್ಟೆ ಕಂಪನಯಾದ ಇಂಡಿಯನ್ ಆಯಿಲ್‌ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಸ್ವಲ್ಪ ಕಡಿಮೆ ಮಾಡಿದೆ. ದೇಶದ ಮೆಟ್ರೋ ನಗರಗಳಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ರೂ.31 ಇಳಿಕೆಯಾಗಿದೆ. ಹೊಸ ಬೆಲೆ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಆದರೆ, 14.2 ಕೆಜಿ ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆ ಬದಲಾಗಿಲ್ಲ.

ಜುಲೈ 1 ರಿಂದ ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ 1,756 ರೂಪಾಯಿಗೆ ಇಳಿಯಲಿದೆ. ಜೂನ್‌ನಲ್ಲಿ ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1,787 ರೂಪಾಯಿ ಇತ್ತು. ಇದೀಗ 31 ರೂಪಾಯಿ ಇಳಿಕೆಯಾಗಿದೆ.

ದೆಹಲಿಯಲ್ಲಿ ಪ್ರತಿ ಸಿಲಿಂಡರ್ ಬೆಲೆ 1,646 ರೂಪಾಯಿ ಇದೆ. ಅಂದರೆ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 30 ರೂಪಾಯಿ ಇಳಿಕೆಯಾಗಿದೆ. ಮುಂಬೈ ಮತ್ತು ಚೆನ್ನೈನಲ್ಲಿ 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಕ್ರಮವಾಗಿ ರೂ.1,598 ಮತ್ತು ರೂ.1,809.5ಕ್ಕೆ ಇಳಿದಿದೆ. ಸಬ್ಸಿಡಿ ರಹಿತ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಇನ್ನು ನಮ್ಮ ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಸಿಲಿಂಡರ್ ಬೆಲೆ ನೋಡುವುದಾದರೆ, 14.5 ಕೆಜಿಯ ಡೊಮೆಸ್ಟಿಕ್ ಸಿಲಿಂಡರ್ ಬೆಲೆ 905.5 ರೂಪಾಯಿ ಇದೆ. ವಾಣಿಜ್ಯ ಬಳಕೆಯ 14.5 ಕೆಜಿಯ ಸಿಲಿಂಡರ್ ಬೆಲೆ 1813 ರೂಪಾಯಿ ಇದೆ ಎಂದು ಹೇಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments