Site icon PowerTV

ಕನ್ನಡಿಗರ ಕ್ಷಮೆಯಾಚಿಸಿದ ಫೋನ್​ಪೇ ಸಿಇಒ ಸಮೀರ್​ ನಿಗಮ್​

ನವದೆಹಲಿ: ಖಾಸಗಿ ಕ್ಷೇತ್ರಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆಯನ್ನು ತೀವ್ರವಾಗಿ ಖಂಡಿಸಿದ್ದ PhonePe ಸಿಇಒಗೆ ಕನ್ನಡಿಗರ ಆಕ್ರೋಶದ ಬಿಸಿ ಮುಟ್ಟಿದ್ದು ಇದೀಗ ಬೇಷರತ್ತಾಗಿ ಕ್ಷಮೆ ಕೇಳಿದ್ದಾರೆ.

ಫೋನ್‌ಪೇ ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸಮೀರ್ ನಿಗಮ್ ಅವರು, ತಾವು ಎಂದಿಗೂ ಕರ್ನಾಟಕ ಮತ್ತು ಕನ್ನಡಿಗರನ್ನು ಅವಮಾನಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಕ್ಷಮೆಯಾಚಿಸಿದ್ದಾರೆ. ಕನ್ನಡಿಗರು ಸಾಮಾಜಿಕ ಮಾಧ್ಯಮದಲ್ಲಿ ಫೋನ್‌ಪೇ ವಿರುದ್ಧ ಬಹಿಷ್ಕಾರದ ಅಭಿಯಾನದ ಬೆನ್ನಲ್ಲೆ ಎಚ್ಚೆತ್ತುಕೊಂಡಿದ್ದಾರೆ.

ನನ್ನ ಹೇಳಿಕೆಯಿಂದ ಯಾರೊಬ್ಬರ ಭಾವನೆಗಳನ್ನು ನೋಯಿಸಿದರೆ, ನಾನು ನಿಜವಾಗಿಯೂ ವಿಷಾದಿಸುತ್ತೇನೆ ಮತ್ತು ನಿಮಗೆ ಬೇಷರತ್ತಾಗಿ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.

ಏನು ಹೇಳಿದ್ದರು ಸಮೀರ್ ನಿಗಮ್?

ಸರ್ಕಾರದ ಮೀಸಲಾತಿ ಕಾಯ್ದೆ ವಿಚಾರವಾಗಿ ಈ ಹಿಂದೆ ಟ್ವೀಟ್ ಮಾಡಿದ್ದ ಸಮೀರ್ ನಿಗಮ್, ”ನನಗೆ 46 ವರ್ಷ. 15ಕ್ಕೂ ಹೆಚ್ಚು ವರ್ಷಗಳ ಕಾಲ ಯಾವುದೇ ರಾಜ್ಯದಲ್ಲಿ ಎಂದಿಗೂ ವಾಸಿಸಿಲ್ಲ. ನನ್ನ ತಂದೆ ಭಾರತೀಯ ನೌಕಾಪಡೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರನ್ನು ದೇಶದಾದ್ಯಂತ ಪೋಸ್ಟ್ ಮಾಡಲಾಗಿದೆ. ಅವರ ಮಕ್ಕಳು ಕರ್ನಾಟಕದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ?

ನಾನು ಕಂಪನಿಗಳನ್ನು ನಿರ್ಮಿಸಿದ್ದು, ಭಾರತದಾದ್ಯಂತ 25000+ ಉದ್ಯೋಗಗಳನ್ನು ಸೃಷ್ಟಿಸಿದೆ! ನನ್ನ ಮಕ್ಕಳು ತಮ್ಮ ತವರು ನಗರದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ? ಎಂದು ಹೇಳುವ ಮೂಲಕ ಉದ್ಯೋಗ ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

Exit mobile version