ಚಿಕ್ಕಮಗಳೂರು: ಓವರ್ ಟೇಕ್ ಮಾಡಲು ಹೋಗಿ ಖಾಸಗಿ ಬಸ್ ಸೇತುವೆಗೆ ಗುದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದ ಬಳಿ ನಡೆದಿದೆ.
ಸದ್ಯ ಯಾವುದೇ ಘಟನೆಯಲ್ಲಿ ಪ್ರಾಣ ಹಾನಿಸಂಭವಿಸಿಲ್ಲ. ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳಿಗೆ ತರೀಕೆರೆ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನೂ ಈ ಆಚಾತುರಕ್ಕೆ ಚಾಲಕನ ಅಜಾಗ್ರತೆ, ಅತಿಯಾದ ವೇಗ ಕಾರಣವಾಗಿದೆ ಎಂದು ಹೇಳಲಾಗುತ್ತಿದ್ದು, ಈ ಬಸ್ ಭದ್ರಾವತಿಯಿಂದ ತರೀಕೆರೆಗೆ ಬರುತ್ತಿತ್ತು. ಕಿರಿದಾದ ಸೇತುವೆ ಬಳಿ ಮತ್ತೊಂದು ಬಸ್ ಓವರ್ ಟೇಕ್ ಮಾಡಲು ಹೋದಾಗ ಈ ಅನಾಹುತ ನಡೆದಿದ್ದು, ಬಸ್ ಚಾಲಕನ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಘಟನೆ ಲಕ್ಕವಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.



Этот информационный материал привлекает внимание множеством интересных деталей и необычных ракурсов. Мы предлагаем уникальные взгляды на привычные вещи и рассматриваем вопросы, которые волнуют общество. Будьте в курсе актуальных тем и расширяйте свои знания!
Подробнее тут – https://vivod-iz-zapoya-1.ru/