Site icon PowerTV

ಸುದೀಪ್ ತಾಯಿಯ ನಿಧನಕ್ಕೆ ಸಂತಾಪ ಸೂಚಿಸಿದ ಡಿಸಿಎಂ ಪವನ್ ಕಲ್ಯಾಣ್

ಆಂಧ್ರಪ್ರದೇಶ : ನಟ, ರಾಜಕಾರಣಿಯು ಆಗಿರುವ ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಅವರು ಸುದೀಪ್ ತಾಯಿಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಕನ್ನಡದಲ್ಲಿ ಕಿಚ್ಚನಿಗೆ ಪತ್ರ ಬರೆದಿರುವ ಪವನ್ ಕಲ್ಯಾಣ  ಸುದೀಪ್ ತಾಯಿಯ ನಿಧನದ ಸುದ್ದಿ ಕೇಳಿ ದುಃಖವಾಗಿದೆ ಎಂದಿದ್ದಾರೆ.

ಖ್ಯಾತ ನಟ ಕಿಚ್ಚ ಸುದೀಪ್ ತಾಯಿ ಸರೋಜ ವಿಧಿವಶರಾಗಿದ್ದಾರೆ ಎಂದು ತಿಳಿದು ದುಃಖವಾಗಿದೆ. ಶ್ರೀಮತಿ ಸರೋಜ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ತಮ್ಮ ನಟನೆಯ ಮೇಲೆ ತಾಯಿಯ ಪ್ರಭಾವ ಹಾಗೂ ಪ್ರೋತ್ಸಾಹವಿದೆ ಎಂದು ಸುದೀಪ್ ಹೇಳಿದ್ದರು.ತಾಯಿಯ ನಷ್ಟದಿಂದ ಬೇಗ ಚೇತರಿಸಿಕೊಳ್ಳಬೇಕು. ಶ್ರೀ ಸುದೀಪ್ ಅವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪಗಳು ಎಂದು ಪವನ್ ಕಲ್ಯಾಣ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

Exit mobile version