Site icon PowerTV

ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿ.ಪಿ ಯೋಗೇಶ್ವರ್

ಹುಬ್ಬಳ್ಳಿ : ಚನ್ನಪಟ್ಟಣ ವಿಧಾನ ಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು. ಇದಕ್ಕೆ ಮತಷ್ಟು ರಂಗು ನೀಡಲು ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿ ಸಿ.ಪಿ ಯೋಗೇಶ್ವರ್ ತಮ್ಮ ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರ ಹುಬ್ಬಳ್ಳಿಯ ನಿವಾಸಕ್ಕೆ ಇಂದು ಮಧ್ಯಾಹ್ನ ಆಗಮಿಸಿದ ಸಿ.ಪಿ ಯೋಗೇಶ್ವರ್ ಲಿಖಿತವಾಗಿ ರಾಜೀನಾಮೆ ಪತ್ರ ಬರೆದು ತಮ್ಮ ರಾಜೀನಾಮೆ ಸಲ್ಲಿಸಿದರು. ಇದರಿಂದ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತವಾಗಿದೆ.

ಸಿಪಿ ಯೋಗಿಶ್ವರ ಹೇಳಿಕೆ

ರಾಜೀನಾಮೆ ಸಲ್ಲಿಸಿ ಹೊರಬಂದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿ.ಪಿ ಯೋಗೇಶ್ವರ್ ನಾನು ನನ್ನ ಸ್ವತಃ ಹಿತಾಸಕ್ತಿಯಿಂದ ರಾಜೀನಾಮೆ ನೀಡಿದ್ದೇನೆ ಮತ್ತು ಈ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ. ನನಗೆ ಯಾವುದೇ ಪಕ್ಷದಿಂದ ಸ್ಪಷ್ಟವಾದ ಸೂಚನೆ ಬರದೆ ಇರುವುದರಿಂದ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ. ನಾನು ಯಾವಾಗಲೂ ಜನರ ಮಧ್ಯೆ ಇರಬೇಕು ಎನ್ನುವವನು. ಹೀಗಾಗಿ ನಾನು ಬರುವ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ತೀರ್ಮಾನ ಕೈಗೊಂಡಿದ್ದೇನೆ. ಸದ್ಯ ನಾನು ಕಾಂಗ್ರೆಸ್ ಪಕ್ಷಕ್ಕೆ ಟಿಕೆಟ್ ಬಗ್ಗೆ ಸ್ಪರ್ಧೆ ಮಾಡುವ ಕುರಿತು ಚರ್ಚೆ ಮಾಡಿಲ್ಲ, ಸಮಯ ಏನು ಬರುತ್ತದೆ ಕಾದು ನೊಡೊಣಾ ಎಂದ ಸಿಪಿ ಯೋಗೇಶ್ವರ್ ಹೇಳಿದರು.

Exit mobile version