Site icon PowerTV

ಬಾರಾಮುಲ್ಲಾದಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಹೊಂದಿದ್ದ ಉಗ್ರನನ್ನು ಹೊಡೆದುರುಳಿಸಿದ ಸೈನಿಕರು

ಜಮ್ಮು ಕಾಶ್ಮೀರ್ : ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಹೊಂದಿದ್ದ ಉಗ್ರನನ್ನು ಭಾರತೀಯ ಸೈನಿಕರು ಹೊಡೆದುರುಳಿಸಿದ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ. ಉಗ್ರನ ಬಳಿಯಿಂದ ಭಾರೀ ಪ್ರಮಾಣದ ಮದ್ದು ಗಂಡುಗಳನ್ನು ವಶಪಡಿಸಿಕೊಂಡಿದ್ದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಭಾರಿ ಶಸ್ತ್ರಸಜ್ಜಿತ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದ್ದು, ಮದ್ದು–ಗುಂಡು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ. 7 ಮಂದಿಯನ್ನು ಹತ್ಯೆಗೈದ ಉಗ್ರರ ಆಟಾಟೋಪ ಪ್ರಕರಣ ಹಸಿರಾಗಿರುವಂತೆಯೇ ಇತ್ತ ಬಾರಾಮುಲ್ಲಾದಲ್ಲಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಹೊಂದಿದ್ದ ಉಗ್ರನನ್ನುಸೋಮವಾರ ಭಾರತೀಯ ಸೇನೆ ಹೊಡೆದುರುಳಿಸಿದೆ.

 

Exit mobile version