Site icon PowerTV

ಸಿ.ಪಿ ಯೋಗೇಶ್ವರ್ ಅಧಿಕೃತವಾಗಿ​ ಕಾಂಗ್ರೆಸ್​​ ಸೇರ್ಪಡೆ

ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆಯಲ್ಲಿ ಅತ್ಯಂತ ಮಹತ್ವದ ಘಟ್ಟಕ್ಕೆ ಇಂದು ತಲುಪಿದ್ದು. ಕೊನೆಗು ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಇಂದು ಬೆಳಿಗ್ಗೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಸಿ.ಪಿ ಯೋಗೇಶ್ವರ್ 11 ಗಂಟೆಗೆ ಕೆಪಿಸಿಸಿ ಕಛೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್​ಗೆ ಸೇರ್ಪಡೆಯಾದರು.

ಕೆಪಿಸಿಸಿ ಕಾರ್ಯಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್​ ನಾಯಕರಾದ ಡಿ.ಕೆ ಶಿವಕುಮಾರ್, ಶಾಸಕ ಚಲುವರಾಯಸ್ವಾಮಿ, ಜಮೀರ್ ಅಹಮ್ಮದ್, ಮಾಜಿ ಸಂಸದ ಡಿ.ಕೆ ಸುರೇಶ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರ ಜೊತೆ ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಈ ಸಮಯದಲ್ಲಿ ಡಿ.ಕೆ ಶಿವಕುಮಾರ್ ಸಿಪಿವೈ ಅವರ ಗುಣಗಾನ ಮಾಡಿದರು.

ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ನೀಡದೆ ಇರುವ ಹಿನ್ನಲೆ ಕಾಂಗ್ರೆಸ್ ಪಕ್ಷ ಸೇರಿರುವ ಸಿಪಿವೈ ನಾಳೆ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ ಎಂದು ಮಾಹಿತಿ ದೊರೆತಿದೆ. ಇಂದು ಸಂಜೆ ಕಾಂಗ್ರೆಸ್ ಹೈಕಮಾಂಡ್​ನಿಂದ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುತ್ತದೆ.

Exit mobile version