Site icon PowerTV

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜಾನಿ ಮಾಸ್ಟರ್​ಗೆ ಜಾಮೀನು ಮಂಜೂರು

ಹೈದರಾಬಾದ್: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ಗೆ ಜಾಮೀನು ಮಂಜೂರಾಗಿದ್ದು. ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಸಹೋದ್ಯೋಗ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಜೈಲು ಸೇರಿದ್ದ ತೆಲುಗು ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ಗೆ ತೆಲಂಗಾಣ ಹೈಕೋರ್ಟ್ ಜಾಮೀನು ನೀಡಿದೆ. ಬಾಹುಬಲಿ, ಪುಷ್ಪಾ ಸೇರಿದಂತೆ ಹಲವು ಹಿಟ್ ಚಿತ್ರಗಳ ಹಾಡಿಗೆ ಹಾಗೂ ಕನ್ನಡದ ಅಪ್ಪು ಡ್ಯಾನ್ಸ್‌ ಹಾಡಿಗೆ ಜಾನಿ ಮಾಸ್ಟರ್ ನೃತ್ಯ ಸಂಯೋಜನೆ ಮಾಡಿದ್ದರು.

ಕೆಲವು ದಿನಗಳ ಹಿಂದೆ ಯುವತಿಯೊಬ್ಬಳು ‘ಜಾನಿ ಮಾಸ್ಟರ್ ಅವರನ್ನು 2017ರಲ್ಲಿ ಭೇಟಿಯಾಗಿದ್ದೆ. 2 ವರ್ಷಗಳ ಬಳಿಕ ಅವರು ಸಹಾಯಕ ನೃತ್ಯ ಸಂಯೋಜಕಿಯಾಗಿ ನೇಮಿಸಿಕೊಂಡಿದ್ದರು. ನಂತರದ ದಿನಗಳಲ್ಲಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಪೊಲೀಸರಿಗೆ ದೂರು ನೀಡಕೂಡದು ಎಂದು ದೈಹಿಕವಾಗಿಯೂ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಫೋಟೊಶೂಟ್ ಮತ್ತು ನೃತ್ಯ ತಾಲೀಮಿನ ಸಮಯದಲ್ಲಿ ಮಾನಸಿಕವಾಗಿ ಹಿಂಸೆ ನೀಡಿದ್ದಾರೆ’ ಎಂದು ಮಹಿಳೆಯೊಬ್ಬರು ಜಾನಿ ಮಾಸ್ಟ‌ರ್ ವಿರುದ್ಧ ದೂರು ನೀಡಿದ್ದರು.

ಈ ದೂರಿನ ಆಧಾರದ ಮೇಲೆ ಕಳೆದ ತಿಂಗಳು ಪೋಲಿಸರು ಜಾನಿ ಮಾಸ್ಟರ್ ಅವರನ್ನು ಬಂಧಿಸಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು. ನಂತರ ನ್ಯಾಯಾಂಗ ಬಂಧನದಲ್ಲಿದ್ದ ಜಾನಿ ಮಾಸ್ಟರ್​ಗೆ ಕೊನೆಗು ಬಿಡುಗಡೆ ಭಾಗ್ಯ ಲಭಿಸಿದೆ.

Exit mobile version