Site icon PowerTV

KSRTC ಬಸ್ ಪಲ್ಟಿ: ಓರ್ವ ಮಹಿಳೆ ಸಾವು 20ಕ್ಕೂ ಹೆಚ್ಚು ಗಾಯ

ದಾವಣಗೆರೆ : ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ  ಒರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು. ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚಿನ ಜನರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ.

ದಾವಣಗರೆ ಜಿಲ್ಲೆಯ  ಹರಪ್ಪನಹಳ್ಳಿ ತಾಲ್ಲೂಕಿನ ಸತ್ತೂರು ಗ್ರಾಮದ ಬಳಿ ಘಟನೆ ನಡೆದಿದ್ದು. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು. ಬಸ್ ನಲ್ಲಿದ್ದ ಸುತ್ತೂರು ಗ್ರಾಮದ ಹನುಮಕ್ಕ (45) ಸಾವನ್ನಪ್ಪಿದ್ದಾರೆ.
ಬಸ್ ನಲ್ಲಿದ್ದ 20 ಕ್ಕೂ ಹೆಚ್ಚು ಪ್ರಯಣಿಕರಿಗೆ ಗಾಯವಾಗಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ದೊರೆತಿದೆ. ಸದ್ಯ ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದು. ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿ ಘಟನೆಯಾಗಿದ್ದು. ಪೋಲಿಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Exit mobile version