Site icon PowerTV

ಮುಸ್ಲಿಂ ರೌಡಿಗಳಿಂದ ಬೀದಿ ಕಾಳಗ : ಯುವಕರಿಬ್ಬರ ಮೇಲೆ ತಲವಾರಿನಿಂದ ಹಲ್ಲೆ

ಮಂಗಳೂರು : ಮುಸ್ಲಿಂ ರೌಡಿಗಳು ನಡುಬೀದಿಯಲ್ಲಿ ಹೊಡೆದಾಡಿಕೊಂಡ ಘಟನೆ ನಗರದಲ್ಲಿ ನಡೆದಿದ್ದು. ಯುವಕರು ತಲವಾರಿನಿಂದ ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಗಂಬೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು. ಪೋಲಿಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಹುಡುಕಾಟ ಆರಂಭಿಸಿದ್ದಾರೆ.

ನಡುಬೀದಿಯಲ್ಲಿ ಯುವಕನನ್ನು ಅಟ್ಟಾಡಿಸಿ ತಲ್ವಾರಿನಿಂದ ದಾಳಿ ನಡೆಸಿದ ಘಟನೆ ಮಂಗಳೂರು ಹೊರವಲಯದ, ಫರಂಗಿಪೇಟೆ ಬಳಿಯ ,ಅಮ್ಮೆಮಾರ್ ಎಂಬಲ್ಲಿ ನಡೆದಿದೆ. ಈ ತಲವಾರು ದಾಳಿಯಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಎಂಬುವವರ ಸ್ಥಿತಿ ಗಂಭೀರವಾಗಿದ್ದು. ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳೀಯ ನಿವಾಸಿಗಳಾದ ಮನ್ಸೂರ್, ಪಲ್ಟಿಇಮ್ರಾನ್ ತಂಡದಿಂದ ತಲವಾರು ದಾಳಿಯಾಗಿದ್ದು. ಮುಸ್ತಾಕ್, ಸರ್ಪುದ್ದೀನ್, ಅಶ್ರಫ್, ರಿಜ್ವಾನ್, ಸಫ್ವಾನ್, ಅದ್ನಾನ್, ನಿಸಾಕ್, ಯಾಸೀರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ಎಂಬುವವರು ಈ ಹಲ್ಲೆಯಲ್ಲಿ ಪಾಲ್ಗೊಂಡಿದ್ದರು ಎಂಬ ಮಾಹಿತಿ ದೊರೆತಿದೆ.

ಹಳೇ ದ್ವೇಷದ ಹಿನ್ನೆಲೆ ತಲವಾರಿನಿಂದ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು. ತಸ್ಲೀಮ್ ಹಾಗೂ ಸ್ನೇಹಿತರು ಮಾತನಾಡುತ್ತಿದ್ದ ಪೋನ್ ಕಾಲ್​ ಬಂದ ಹಿನ್ನಲೆ ತಸ್ಲೀಮ್ ಹಾಗೂ ತಂಡ ಅಮ್ಮೆಮಾರ್ ಶಾಲಾ ಬಳಿಗೆ ಹೋಗಿ ಅಲ್ಲಿ ಹಲ್ಲೆ ಮಾಡಿದ್ದಾರೆ ಎಂದು ಮಾಹಿತಿ ದೊರೆತಿದೆ. ಹಲ್ಲೆ ಸಂಬಂಧ ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೋಲಿಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Exit mobile version