Site icon PowerTV

ಮನೆಕೆಲಸದ ಯುವತಿ ಮೇಲೆ ಅತ್ಯಾಚಾರ : ತಲೆಮರಿಸಿಕೊಂಡೆ ಜಾಮೀನಿಗೆ ಅರ್ಜಿಸಲ್ಲಿಸಿದ ಆರೋಪಿ

ಕೇರಳ : 23 ವರ್ಷದ ಬುಡಕಟ್ಟು ಯುವತಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಕೇರಳದಲ್ಲಿ ನಡೆದಿದ್ದು. 75 ವರ್ಷದ ವ್ಯಕ್ತಿ ವಿರುದ್ಧ FIR ದಾಖಲು ಮಾಡಲಾಗದೆ. ಆರೋಪಿ ಕೆ.ಶಿವಪ್ರಸಾದ್ ತಲೆಮರಿಸಿಕೊಂಡಿದ್ದು ಪೋಲಿಸರು ತನಿಖೆಯನ್ನು ನಡೆಡಸುತ್ತಿದ್ದಾರೆ.

ಒಡಿಶಾ ಮೂಲದ ಬುಡಕಟ್ಟು ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕೇರಳದ 75 ವರ್ಷದ ವ್ಯಕ್ತಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯು ಎರ್ನಾಕುಲಂನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದು, ಮಂಗಳವಾರ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂತ್ರಸ್ತ ಯುವತಿ ಒಡಿಶಾ ಮೂಲದ ಗಜಪತಿ ಜಿಲ್ಲೆಯವರು ಎಂದು ಹೇಳಲಾಗಿದೆ. ಮನೆ ಕೆಲಸ ಮಾಡುತ್ತಿದ್ದ ಆಕೆಯ ಮೇಲೆ ಜ್ಯೂಸ್ ಎರಚಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕೆ.ಶಿವಪ್ರಸಾದ್ ಎಂಬುವರ ಮೇಲೆ ಪೊಲೀಸರು ಎಫ್‌ಐಆ‌ರ್ ದಾಖಲಿಸಿದ್ದಾರೆ. ಶಿವಪ್ರಸಾದ್‌ ಅವರು ಕೇರಳದ ರಾಜ್ಯ ಕೃಷಿ ನಿಗಮ, ತೋಟಗಾರಿಕಾ ಉತ್ಪನ್ನಗಳ ಅಭಿವೃದ್ಧಿ ನಿಗಮ, ಕೇರಳ ರಾಜ್ಯ ಚಲನಚಿತ್ರ ಅಭಿವೃದ್ಧಿ ನಿಗಮ ಮತ್ತು ಪ್ಲಾಂಟೇಶನ್ ಕಾರ್ಪೊರೇಷನ್ ಆಫ್ ಕೇರಳ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

Exit mobile version