Site icon PowerTV

ಬೆಂಗಳೂರಿನಲ್ಲಿಂದು ಮಳೆ ಸಾಧ್ಯತೆ : ಹವಮಾನ ಇಲಾಖೆಯಿಂದ ಎಚ್ಚರಿಕೆ

ಬೆಂಗಳೂರು: ಕಳೆದ ಒಂದು ವಾರದಿಂದ ಬಿಡುವು ನೀಡಿರುವ ವರುಣ ಮತ್ತೆ ಆಗಮಿಸುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದ್ದು. ಇಂದು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಂಭವವಿದೆ.

ಮಳೆಯಿಂದ ಕೆಲವು ದಿನಗಳಿಂದ ಬಿಡುವು ಪಡೆದಿದ್ದ ಜನರು ಪತ್ತೆ ಛತ್ರಿ, ರೈನ್​ಕೋಟ್​ ಮೊರೆ ಹೋಗಬೇಕಾದ ಸಂಧರ್ಭವಿದೆ ಎಂದು ಮಾಹಿತಿ ದೊರೆತಿದ್ದು. ದೀಪಾವಳಿಯ ಉಡುಗೊರೆಯಾಗಿ ವರುಣ ಪತ್ತೆ ಆಗಮಿಸು ಸಾಧ್ಯತೆ ಇದೆ ಎಂಬ ಮಾಹಿತಿ ದೊರೆತಿದೆ. ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ,ತುಮಕೂರು, ಹಾಸನ, ಚಿಕ್ಕಮಗಳೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು .

ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ದೊರೆತಿದ್ದು.ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಿದೆ.

Exit mobile version