Site icon PowerTV

ಆಯುಷ್ಮಾನ್ ಭಾರತ್ ಯೋಜನೆ ಜಾರಿಗೊಳಿಸದ AAP ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ BJP

ದೆಹಲಿ : ನರೇಂದ್ರ ಮೋದಿ ಸರ್ಕಾರದ ಮಹತ್ವದ ಯೋಜನೆಯಾದ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯನ್ನು ದೆಹಲಿಯಲ್ಲಿ ಜಾರಿಗೊಳಿಸದ ಆಮ್​ಆದ್ಮಿ ಪಕ್ಷದ ಸರ್ಕಾರದ ವಿರುದ್ದ ದೆಹಲಿಯ ಬಿಜೆಪಿ ಸಂಸದರು ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದಾರೆ ಎಂದು ಬಿಜೆಪಿ ದೆಹಲಿ ಘಟಕದ ಅಧ್ಯಕ್ಷ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಎಪಿ ಸರ್ಕಾರ ಮತ್ತು ಪಕ್ಷದ ರಾಷ್ಟ್ರೀಯ ಸಂಚಾಲಕರಾದ ಅರವಿಂದ್ ಕೇಜ್ರವಾಲ್‌ ಅವರು ದೆಹಲಿಯಲ್ಲಿ ಲಕ್ಷಾಂತರ ಅರ್ಹ ನಾಗರಿಕರನ್ನು ಆರೋಗ್ಯ ವಿಮಾ ಯೋಜನೆಯಿಂದ ವಂಚಿತರನ್ನಾಗಿಸಿದ್ದಾರೆ’ ಎಂದು ಸಚ್‌ದೇವ ವಾಗ್ದಾಳಿ ನಡೆಸಿದ್ದಾರೆ. ಆಯುಷ್ಮಾನ್ ಭಾರತ್ ಯೋಜನೆಯನ್ನು ರಾಷ್ಟ್ರ ರಾಜಧಾನಿಯಲ್ಲಿ ಜಾರಿಗೊಳಿಸಲಾಗುವುದು ಎಂದು ದೆಹಲಿ ವಿಧಾನಸಭೆಯಲ್ಲಿ ಅಂದಿನ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಈ ಹಿಂದೆ ಫೋಷಿಸಿದ್ದರು. ಈಗ ಎಎಪಿ ತನ್ನ ಭರವಸೆಯಿಂದ ಹಿಂದೆ ಸರಿಯುತ್ತಿದೆ ಎಂದು ಸಚ್‌ದೇವ ಟೀಕಿಸಿದ್ದಾರೆ.

 

Exit mobile version