Site icon PowerTV

ಟ್ರ್ಯಾಕ್ಟರ್ ತೊಳೆಯಲು ಹೋಗಿ ಇಬ್ಬರು ವ್ಯಕ್ತಿಗಳು ನೀರು ಪಾಲು

ದಾವಣಗೆರೆ : ತುಂಗಭದ್ರ ನದಿಯಲ್ಲಿ ಟ್ರ್ಯಾಕ್ಟರ್ ತೊಳೆಯಲು ಹೋಗಿ ಇಬ್ಬರು ವ್ಯಕ್ತಿಗಳು ನೀರು ಪಾಲಾದ ಘಟನೆ ದಾವಣಗೆರೆ ಜಿಲ್ಲೆಯ, ಹರಿಹರ ತಾಲ್ಲೂಕಿನ ಗುತ್ತೂರು ಗ್ರಾಮದ ಬಳಿ ತುಂಗಾಭದ್ರಾ ನದಿಯಲ್ಲಿ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಗುತ್ತೂರು ಗ್ರಾಮದ ಹನುಮಂತಪ್ಪ(56), ಪ್ರಶಾಂತ್(16) ಸಾವನ್ನಪ್ಪಿದ್ದು.ಟ್ಯ್ರಾಕ್ಟರ್ ತೊಳೆಯಲು ಹೋಗಿದ್ದ ವೇಳೆ ಅವಘಡ ಸಂಭವಿಸಿದೆ. ನೀರಿನಲ್ಲಿ ತೇಲುತ್ತಿದ್ದ ಬಕೆಟ್ ಹಿಡಿಯಲು ಹೋಗಿ ಮರಳು ಗುಂಡಿಗೆ ಬಿದ್ದ ಪ್ರಶಾಂತ್​ನನ್ನು ರಕ್ಷಿಸಲು ಹೋಗಿ ಹನುಮಂತಪ್ಪ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ದೊರೆತಿದೆ.

ಸದ್ಯ ಮೃತರ ಶವವನ್ನು ಅಗ್ನಿಶಾಮಕ ದಳ ಮತ್ತು ಸ್ಥಳಿಯರು ಸೇರಿ ಹೊರಗೆ ತೆಗೆದಿದ್ದು. ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಘಟನೆಯಲ್ಲಿ ನಡೆದಿದೆ.

Exit mobile version