Site icon PowerTV

ಪಾಕ್​ ಗಡಿಯಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಣೆ ಮಾಡಿದ ಮೋದಿ

ಗುಜರಾತ್​ : ನರೇಂದ್ರ ಮೋದಿ ಪ್ರಧಾನಮಂತ್ರಿಯಾದಾಗಿನಿಂದ ಪ್ರತಿ ವರ್ಷ ಸೈನಿಕರ ಜೊತೆ ದೀಪಾವಳಿ ಆಚರಿಸುವ ಸಂಪ್ರದಾಯ ರೂಢಿಸಿಕೊಂಡು ಬಂದಿದ್ದಾರೆ. ಈ ಬಾರಿ ಕೂಡ ಗುಜರಾತ್​​ನ ಕಚ್​ನಲ್ಲಿ ಸೈನಿಕರಿಗೆ ಸ್ವೀಟ್ ತಿನ್ನಿಸುವ ಮೂಲಕ ಪಿಎಂ ಮೋದಿ ದೀಪಾವಳಿಯನ್ನು ಆಚರಿಸಿದ್ದಾರೆ.

ಇಂದು ಬೆಳಿಗ್ಗೆ ಸರ್ಧಾರ್​ ವಲ್ಲಭಾಬಾಯಿ ಪಟೇಲರ ಜನ್ಮದಿನ ನಿಮಿತ್ತ ಏಕತ ದಿವಸ್​ ಕಾರ್ಯಕ್ರಮದಲ್ಲಿ ಭಾಗಹಿಸಿದ ಮೋದಿ. ನಂತರ ಗುಜರಾತ್​ನ ಕಚ್​ನಲ್ಲಿ ಭಾರತ-ಪಾಕಿಸ್ತಾನ ಗಡಿಯಲ್ಲಿ ಯೋಧರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಿಸಿದ್ದಾರೆ.

ಕಚ್‌ನಲ್ಲಿ ಬಿಎಸ್‌ಎಫ್ ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ, ಅವರಿಗೆ ಸ್ವೀಟ್ ಹಂಚಿದ್ದಾರೆ. ಕಚ್​ಗೆ ಭೇಟಿ ನೀಡಿದ ಸಂದರ್ಭದಲ್ಲಿ, ಸರ್ ಕ್ರೀಕ್ ಬಳಿಯ ಲಕ್ಕಿ ನಾಲಾದಲ್ಲಿ ಸೈನಿಕರೊಂದಿಗೆ ಬೆಳಕಿನ ಹಬ್ಬ ದೀಪಾವಳಿಯನ್ನು ಆಚರಿಸಿದ ಪ್ರಧಾನಿ ಮೋದಿ ಭಾರತೀಯ ಸೈನಿಕರಿಗೆ ಸಿಹಿತಿಂಡಿಗಳನ್ನು ತಿನ್ನಿಸಿದ್ದಾರೆ.

2014ರಿಂದ ಪ್ರಧಾನಿ ನರೇಂದ್ರ ಮೋದಿ ಪ್ರತಿ ವರ್ಷವೂ ದೀಪಾವಳಿಯನ್ನು ದೇಶದ ವಿವಿಧ ಮೂಲೆಗಳಲ್ಲಿ ನಿಯೋಜಿಸಲಾದ ಸೈನಿಕರೊಂದಿಗೆ ಆಚರಿಸುವ ಸಂಪ್ರದಾಯ ರೂಢಿಸಿಕೊಂಡಿದ್ದಾರೆ. ಸೇನೆಯ ಸಮವಸ್ತ್ರವನ್ನು ಧರಿಸಿರುವ ಪ್ರಧಾನಿ ಮೋದಿ ಕಚ್​ನಲ್ಲಿ ನಿಯೋಜಿಸಲಾದ ಸೈನಿಕರಿಗೆ ಸಿಹಿತಿಂಡಿಗಳನ್ನು ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ.

Exit mobile version