Site icon PowerTV

ಹಾಸನಾಂಬೆ ದರ್ಶನ ಮುಗಿಸಿ ಮನೆಗೆ ಹೊಗುತ್ತಿದ್ದ ವೇಳೆ ಅಪಘಾತ: ತಂದೆ, ಮಗಳ ದುರ್ಮರಣ

ಹಾಸನ : ಹಾಸನಾಂಬೆ ದೇವಿ ದರ್ಶನ ಮುಗಿಸಿ ಹೋಗುವಾಗ ಭಕ್ತರಿಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದ್ದು.ತಂದೆ-ಮಗಳು ಧಾರುಣವಾಗಿ ಸಾವನ್ನಪ್ಪಿದ್ದು, ತಾಯಿ ಸ್ಥಿತಿ ಗಂಭೀರವಾಗಿದೆ ಎಂದು ಮಾಹಿತಿ ದೊರೆತಿದೆ.

ಆಲೂರು ತಾಲ್ಲೂಕಿನ, ಪಾಳ್ಯ ಹೋಬಳಿ, ಎಚ್.ಪುರ ಗ್ರಾಮದ ಕುಮಾರ ನಿನ್ನೆ ರಾತ್ರಿ ಪತ್ನಿ ಪುಟ್ಟಮ್ಮ, ಮಗಳು ಕಾವ್ಯ ಜೊತೆ ಹಾಸನಾಂಬೆ ದೇವಿ ದರ್ಶನಕ್ಕೆ ಬಂದಿದ್ದರು. ಹಾಸನಾಂಬೆ ದೇವಿ ದರ್ಶನ ಪಡೆದು ವಿಜಯನಗರದಲ್ಲಿರುವ ಸಂಬಂಧಿಕರ ಮನೆಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮೂವರಿಗೆ ಹಿಂದಿನಿಂದ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ವೇಗವಾಗಿ ಬಂದ KA-02-MM-9815 ನಂಬರ್‌ನ ಸ್ವಿಫ್ಟ್ ಕಾರು, ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮೂವರಿಗೂ ಡಿಕ್ಕಿ ಹೊಡೆದಿದ್ದು. ಸ್ಥಳದಲ್ಲೇ ಕುಮಾರ ಮತ್ತು ಕಾವ್ಯ ಸಾವನ್ನಪ್ಪಿದ್ದಾರೆ. ಗಾಯಾಳು ಪುಟ್ಟಮ್ಮನ ಸ್ಥಿತಿ ಗಂಭೀರವಾಗಿದ್ದು.ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಫೋಟೋಗ್ರಾಫರ್ ಶಶಾಂಕ್ ಎಂಬಾತ ಅಪಘಾತ ಮಾಡಿದ ಕಾರು ಚಾಲಕ ಎಂದು ತಿಳಿದು ಬಂದಿದ್ದು.ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಪೋಲಿಸರು ಹೆಚ್ಚನ ತನಿಖೆ ನಡೆಸುತ್ತಿದ್ದಾರೆ.

Exit mobile version