Site icon PowerTV

ಪೂರ್ವ ಲಡಾಖ್ ಗಡಿಯಲ್ಲಿ ಭಾರತ-ಚೀನಾ ದೇಶದ ಯೋಧರಿಂದ ಸಿಹಿ ವಿನಿಮಯ

ದೆಹಲಿ : ಭಾರತ ಮತ್ತು ಚೀನಾದ ನಡುವಿನ ಗಡಿ ಸಂಘರ್ಷ ನಿಧಾನವಾಗಿ ಕಡಿಮೆಯಾಗುತ್ತಿದ್ದು. ಎರಡು ದೇಶಗಳು ಗಲ್ವಾನ್​ ಗಡಿಯಿಂದ ತಮ್ಮ ಸೇನೆಗಳನ್ನು ವಾಪಾಸ್ ಕರೆಸಿಕೊಳ್ಳಲು ಒಪ್ಪಿಗೆ ಸೂಚಿಸಿದ್ದು.ಇದೀಗ ಪೂರ್ವಲಡಾಕ್​ ಗಡಿಯಲ್ಲಿ ಭಾರತ ಮತ್ತು ಚೀನಾದ ಯೋಧರು ಪರಸ್ಪರ ಸಿಹಿ ಹಂಚಿಕೊಂಡಿದ್ದಾರೆ.

ಭಾರತ ಹಾಗೂ ಚೀನಾ ದೇಶದ ಯೋಧರು ವಾಸ್ತವ ನಿಯಂತ್ರಣ ರೇಖೆಯ ಉದ್ದಕ್ಕೂ ಹಲವಾರು ಗಡಿ ಕೇಂದ್ರಗಳಲ್ಲಿ ಸಿಹಿ ವಿನಿಮಯ ಮಾಡಿಕೊಂಡಿದ್ದಾರೆ. ಪೂರ್ವ ಲಡಾಖ್‌ನಲ್ಲಿ ಭಾರತ ಮತ್ತು ಚೀನಾ ನಡುವೆ ಸಂಘರ್ಷಕ್ಕೆ ಕಾರಣವಾಗಿದ್ದ ಡೆಮ್ ಚೋಕ್ ಮತ್ತು ಡೆಪ್ಪಾಂಗ್ ಬಯಲಿನಲ್ಲಿ ಎರಡೂ ದೇಶಗಳು ನಿಯೋಜಿಸಿದ್ದ ಸೇನೆಯನ್ನು ಹಿಂದಕ್ಕೆ ಪಡೆಯುವ ಕಾರ್ಯಾಚರಣೆ ಪೂರ್ಣಗೊಂಡ ಬೆನ್ನಲ್ಲೇ ಸಿಹಿ ವಿನಿಮಯ ಮಾಡಿಕೊಂಡಿದ್ದಾರೆ.

ಪೂರ್ವ ಲಡಾಖ್‌ನ ವಾಸ್ತವ ನಿಯಂತ್ರಣ ರೇಖೆಯ ಬಳಿ ಗಸ್ತು ನಡೆಸುವ ಮತ್ತು ಸೇನೆಯ ವಾಪಸಾತಿ ಸಂಬಂಧ ಉಭಯ ದೇಶಗಳ ನಡುವೆ ಏರ್ಪಟ್ಟ ಒಪ್ಪಂದದ ಅನುಸಾರ ಈ ಪ್ರಕ್ರಿಯೆ ನಡೆದಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತ ಮತ್ತು ಚೀನಾದ ಯೋಧರು ಬಾರ್ಡರ್ ಪರ್ಸನಲ್ ಮೀಟಿಂಗ್ ಕೇಂದ್ರಗಳಲ್ಲಿ ಪರಸ್ಪರ ಸಿಹಿ ಹಂಚಿಕೊಂಡಿದ್ದಾರೆ

Exit mobile version