Site icon PowerTV

ಮಹಿಳೆಯ ಕೊಲೆ ಮಾಡಿ ಪೆಟ್ರೋಲ್ ಹಾಕಿ ಸುಟ್ಟು ಹಾಕಿದ ದುಷ್ಕರ್ಮಿಗಳು

ಕಲಬುರಗಿ : ಮಹಿಳೆಯನ್ನ ಕೊಲೆ ಮಾಡಿ ಪೆಟ್ರೋಲ್ ಹಾಕಿ ಸುಟ್ಟು ಹಾಕಿರುವ ಘಟನೆ ಕಲಬುರಗಿಯಲ್ಲಿ ನಡೆದಿದ್ದು. ಕೌಟುಂಬಿಕ ಕಲಹಕ್ಕೆ ಈ ರೀತಿಯಾಗಿ ಬರ್ಬರವಾಗಿ ಕೊಲೆ ಮಾಡಿದ್ದಾರೆ ಎಂದು ತಿಳದುಬಂದಿದೆ. ಕೊಲೆಯಾದ ಮಹಿಳೆಯನ್ನು ಜ್ಯೋತಿ(29) ಎಂದು ಗುರುತಿಸಲಾಗಿದೆ.

ಜ್ಯೋತಿ ಕಳೆದ 10 ವರ್ಷದ ಹಿಂದೆ ಮದುವೆಯಾಗಿದ್ದಳು, ಆದರೆ ಗಂಡನೊಂದಿಗೆ ಹೊಂದಾಣಿಕೆಯಾಗದೆ ಕಳೆದ 5 ವರ್ಷಗಳಿಂದ ಗಂಡನ ಮನೆಯನ್ನು ಬಿಟ್ಟು ಕಲಬುರಗಿ ನಗರದ ಸಂಗಮೇಶ್ವರ ಕಾಲೋನಿಯ ತವರು ಮನೆಯಲ್ಲಿ ವಾಸಿಸುತ್ತಿದ್ದಳು ಎಂದು ಮಾಹಿತಿ ದೊರೆತಿದೆ.

ನೆನ್ನೆ ಬೆಳಿಗ್ಗೆ ಮನೆಯಿಂದ ಹೊರೆಗೆ ಹೋಗಿದ್ದ ಜ್ಯೋತಿ ಮನೆಗೆ ಬಂದಿರಲಿಲ್ಲ. ಆದರೆ ಮಧ್ಯಾಹ್ನದ ಹೊತ್ತಿಗೆ ಇಟಿಗಾ ಗ್ರಾಮದ ಬಳಿ ಸುಟ್ಟ ಸ್ಥಿತಿಯಲ್ಲಿ ಜ್ಯೋತಿಯ ಶವ ಪತ್ತೆಯಾಗಿದ್ದು. ಕೌಟುಂಬಿಕ ಕಲಹದ ಹಿನ್ನಲೆ ಕೊಲೆಮಾಡಲಾಗಿದೆ ಎಂದು ಶಂಕಿಸಲಾಗಿದೆ. ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೋಲಿಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Exit mobile version