Site icon PowerTV

ಬೈಕ್​ ಮತ್ತು ಕಾರಿನ ನಡುವೆ ಅಪಘಾತ : ಸ್ಥಳದಲ್ಲೆ ಇಬ್ಬರ ಸಾವು

ರಾಯಚೂರು(ನ.05):  ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಯಚೂರು ನಗರದ ಹೊರವಲಯದ ಪವರ್ ಗ್ರಿಡ್ ಬಳಿ ನಡೆದಿದೆ. ಶರಣಬಸವ(28), ಶಿವು (26) ಮೃತ ದುರ್ದೈವಿಗಳು.

ಬೈಕ್​ನಲ್ಲಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು ಎಂದು ಮಾಹಿತಿನ ದೊರೆತಿದ್ದು.ಬೈಕ್ ನಲ್ಲಿದ್ದ ಇನ್ನಿಬ್ಬರು ಇರ್ಫಾನ್ ಹಾಗೂ ಗರೀಬ್ ಎಂಬುವರಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳುಗಳನ್ನ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ರಾಯಚೂರಿನಿಂದ ಕಲ್ಲೂರಿಗೆ ಒಂದೇ ಬೈಕ್‌ನಲ್ಲಿ ನಾಲ್ವರು ಹೊರಟಿದ್ದರು. ಪವರ್ ಗ್ರಿಡ್ ಬಳಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದಿದೆ. ಆಗ ಕೆಳಕ್ಕೆ ಬಿದ್ದ ಬೈಕ್ ಸವಾರರ ಮೇಲೆ ಲಾರಿಯೊಂದು ಹರಿದಿದೆ. ಹೀಗಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರರು ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪಶ್ಚಿಮ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Exit mobile version