Site icon PowerTV

ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹ*ತ್ಯೆ : 4 ಮೃತದೇಹಗಳನ್ನು ಪತ್ತೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

ಗದಗ(ನ.07): ಕೌಟುಂಬಿಕ ಕಲಹ, ಸಾಲದಿಂದ ಬೇಸತ್ತು ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ವ್ಯಕ್ತಿಗೆ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬ್ರಿಡ್ಜ್ ಬಳಿ ನಿನ್ನೆ(ಬುಧವಾರ) ನಡೆದಿದೆ.

ಮೃತಪಟ್ಟವರ ದೇಹಕ್ಕಾಗಿ ಮೀನುಗಾರರು ಹುಡುಕಾಟ ನಡೆಸಿದ್ದರು. ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ಈಜುತಜ್ಜರು, ಮೀನುಗಾರು ಕಾರ್ಯಾಚರಣೆ ನಡೆಸಿದ್ದರು. ಮಂಗಳವಾರ ಸಂಜೆ ಮಂಜುನಾಥ್ ತನ್ನ ಮೂವರು ಮಕ್ಕಳೊಂದಿಗೆ ನದಿಗೆ ಹಾರಿದ್ದರು.

ಕೌಟುಂಬಿಕ ಕಲಹ, ಸಾಲದಿಂದ ಬೇಸತ್ತು ಮಕ್ತುಂಪುರ ಗ್ರಾಮದ ಮಂಜುನಾಥ್ ಆತ್ಮಹತ್ಯೆಗೆ ಶರಣಾಗಿದ್ದರು. ಹೆಂಡತಿಯ ಅಣ್ಣನ ಮಗ ವೇದಾಂತ ಸೇರಿದಂತೆ ತನ್ನ ಇಬ್ಬರು ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನೆನ್ನೆ ಸಂಜೆ 3 ವರ್ಷದ ವೇದಾಂತ  ಶವವನ್ನು ಹುಡುಕಿದ್ದ ಅಗ್ನಿಶಾಮಕ ಸಿಬ್ಬಂದಿಗಳು ಇಂದು ಉಳಿದ 3 ಶವಗಳನ್ನು ಪತ್ತೆ ಹಚ್ಚಿದ್ದಾರೆ. ಸದ್ಯ ಮೃತ ದೇಹಗಳನ್ನ ಮುಂಡರಗಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ನಂತರ ಮೃತ ದೇಹಗಳನ್ನ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ. ಮುಕ್ತಂಪುರ ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದ‌ನ ಮುಗಿಲು ಮುಟ್ಟಿದೆ. ಮೃತರೆಲ್ಲರೂ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಮಕ್ತಂಪುರ ಗ್ರಾಮದ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ

Exit mobile version