Site icon PowerTV

‘ಇಂದಿರಾ ಗಾಂಧಿ ಮುಂದೆ ಅಮಿತ್ ಶಾ ಬಚ್ಚಾ: ಮಲ್ಲಿಕಾರ್ಜುನ್​ ಖರ್ಗೆ

ಮಹರಾಷ್ಟ್ರ:  ವಿಧಾನ ಸಭ ಚುನಾವಣಾ ರ‍್ಯಾಲಿಯಲ್ಲಿ ಎಐಸಿಸಿ(AICC) ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಗೃಹ(Home minister) ಸಚಿವ ಅಮಿತ್​ ಷಾ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಸ್ವತಃ ಇಂದಿರಾ ಗಾಂಧಿ ಅವರೇ ಸ್ವರ್ಗದಿಂದ ಇಳಿದು ಬಂದರೂ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿಯನ್ನು ಮರುಸ್ಥಾಪನೆ ಮಾಡುವುದಿಲ್ಲ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

ಇಂದಿರಾ ಗಾಂಧಿ ಮುಂದೆ ಅಮಿತ್ ಶಾ ಬಚ್ಚಾ ಎಂದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಹಿರಿಯ ಕಾಂಗ್ರೆಸ್ ನಾಯಕ, ಶಾ ವಿರುದ್ಧ ಹರಿಹಾಯ್ದಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಪ್ರಚಾರದ ವೇಳೆ ರಾಲಿಯೊಂದರಲ್ಲಿ ಮಾತನಾಡಿದ್ದ ಅಮಿತ್ ಶಾ, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ಯಾವ ಸಂದರ್ಭದಲ್ಲಿಯೂ ಮರಳಿ ಸ್ಥಾಪಿಸುವ ಪ್ರಶ್ನೆಯೇ ಇಲ್ಲ ಎಂದು ಕಡ್ಡಿಮುರಿದಂತೆ ಹೇಳಿದ್ದರು.

Exit mobile version