Site icon PowerTV

ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾ*ವು

ಮಂಗಳೂರು : ಖಾಸಗಿ ಬೀಚ್ ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿದ್ದುಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟನಲ್ಲಿ ಘಟನೆ ನಡೆದಿದೆ.

ಮೈಸೂರು ವಿಜಯ ನಗರ ದೇವರಾಜ ಮೊಹಲ್ಲ ನಿವಾಸಿ ಕೀರ್ತನ ಎನ್(21) ಮೈಸೂರು ಕುರುಬಾರಹಳ್ಳಿ ನಾಲ್ಕನೇ ಕ್ರಾಸ್ ನಿವಾಸಿ ನಿಶಿತ ಎಂ.ಡಿ. (21) ಹಾಗೂ ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ ಎಸ್ (20) ಮೃತ ಯುವತಿಯರು ಎಂಬ ಮಾಹಿತಿ ದೊರೆತಿದ್ದು. ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಸ್ವಿಮ್ಮಿಂಗ್ ಫೂಲ್ ನಲ್ಲಿ ಈಜಲು ತೆರಳಿದ್ದಾಗ ಘಟನೆ ಸಂಭವಿಸಿದೆ.

ನೀರಿಗಿಳಿದಿದ್ದ ಮೂವರು ಯುವತಿಯರ ಪೈಕಿ ಓರ್ವ ಯುವತಿ ಮೊದಲು ನೀರಿನಲ್ಲಿ ಮುಳುಗಿದ್ದು. ಆಕೆಯನ್ನು ಕಾಪಾಡಲು ಉಳಿದಿಬ್ಬರು ಹೋಗಿದ್ದಾರೆ ಆ ಸಂಧರ್ಬದಲ್ಲಿ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸದ್ಯ ಉಳ್ಳಾಲ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದು. ಪ್ರಕರಣ ದಾಖಲಿಸಿಕೊಂಡಿದ್ದಾರೆ.

Exit mobile version