Site icon PowerTV

ಮತಗಟ್ಟೆಗಳಲ್ಲಿ ಮೊಬೈಲ್‌ ನಿಷೇಧ ಕಾನೂನು ಬಾಹಿರವಲ್ಲ: ಬಾಂಬೆ ಹೈಕೋರ್ಟ್‌

ಬಾಂಬೆ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವ ಭಾರತದ ಚುನಾವಣಾ ಆಯೋಗದ ನಿರ್ಧಾರ ಕಾನೂನು ಬಾಹಿರವಲ್ಲ ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ನವೆಂಬರ್ 20ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ನಿಷೇಧದ ವಿರುದ್ಧ ಮುಂಬೈ ಮೂಲದ ವಕೀಲ ಉಜಾಲಾ ಯಾದವ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ಕೆ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ಅಮಿತ್ ಬೋರ್ಕರ್ ಅವರಿದ್ದ ವಿಭಾಗೀಯ ಪೀಠವು ವಜಾಗೊಳಿಸಿದೆ.

ಮತದಾರರು ತಮ್ಮ ಮೊಬೈಲ್ ಫೋನ್‌ಗಳನ್ನು ಮತಗಟ್ಟೆಗಳಿಗೆ ಕೊಂಡೊಯ್ಯಲು ಅನುಮತಿ ನೀಡುವಂತೆ ಹಾಗೂ ಡಿಜಿಲಾಕರ್ ಅಪ್ಲಿಕೇಶನ್ ಮೂಲಕ ಗುರುತಿನ ಚೀಟಿ ತೋರಿಸಿ ಮತದಾನ ಮಾಡಲು ಅನುಮತಿ ನೀಡುವಂತೆ ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಒತ್ತಾಯಿಸಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಲಾಗಿತ್ತು. ಇದರ ಕುರಿತಂತೆ ಇಂದು ತೀರ್ಪು ನೀಡಿರುವ ನ್ಯಾಯಾಲಯ ಮತಗಟ್ಟೆಗಳಿಗೆ ಮೊಬೈಲ್​ ಪೋನ್​ ನಿಷೇದಿಸುದು ಕಾನೂನು ಬಾಹಿರವಲ್ಲ ಎಂದು ಮಾಹಿತಿ ದೊರೆತಿದೆ.

Exit mobile version