Site icon PowerTV

ಶೀಘ್ರದಲ್ಲಿಯೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಭೇಟಿ

ಮಾಸ್ಕೊ:  ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶೀಘ್ರದಲ್ಲಿಯೇ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ರಷ್ಯಾ ಸರ್ಕಾರದ ವಕ್ತಾರರು ತಿಳಿಸಿದ್ದಾರೆ. ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭಾರತ ಭೇಟಿಯ ನಿರ್ದಿಷ್ಟ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಮತ್ತು ರಷ್ಯಾ ಅದಕ್ಕೆ ತಯಾರಿಯನ್ನು ಪ್ರಾರಂಭಿಸುತ್ತದೆ ಎಂದು ಕ್ರೆಮ್ಲಿನ್ ಪತ್ರಿಕಾ ಕಾರ್ಯದರ್ಶಿ ಡಿಮಿಟ್ರಿ ಪೆಸ್ಕೋವ್ ತಿಳಿಸಿದ್ದಾರೆ.

ರಷ್ಯಾಕ್ಕೆ ಪ್ರಧಾನಿ ಮೋದಿಯವರ ನಿರಂತರ ಎರಡು ಭೇಟಿಗಳ ನಂತರ ಈಗ ನಮ್ಮ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.ಪ್ರಧಾನಿ ಮೋದಿ ಜುಲೈ 8ರಂದು ಮತ್ತು ಅಕ್ಟೋಬರ್ 22 & 23 ರಂದು ರಷ್ಯಾಕ್ಕೆ ಭೇಟಿ ನೀಡಿದ್ದರು. ರಷ್ಯಾ ಮತ್ತು ಯೂಕ್ರೇನ್ ನಡುವೆ ಶಾಂತಿ ನೆಲೆಸುವಲ್ಲಿ ಭಾರತ ಪ್ರಮುಖ ಪಾತ್ರ ವಹಿಸುತ್ತಿದೆ. ಈ ವಿಚಾರವಾಗಿ ನಾವು ಭಾರತ, ಚೀನಾ ಮತ್ತು ಬ್ರೆಜಿಲ್ ಜತೆ ಸಂಪರ್ಕದಲ್ಲಿದ್ದೇವೆ ಎಂದು ಸ್ವತಃ ರಷ್ಯಾ ಅಧ್ಯಕ್ಷ ಪುಟಿನ್ ಹೇಳಿದ್ದಾರೆ.

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ವರ್ಷಾಂತ್ಯ ದ ವೇಳೆಗೆ ಭಾರತಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ .ಭಾರತ ಮತ್ತು ರಷ್ಯಾ ಈ ವರ್ಷ ತಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಮತ್ತು ಉಕ್ರೇನ್​ ಯುದ್ದದ ಮೇಲೆ ಕೇಂದ್ರೀಕರಿಸಿದ ಅನೇಕ ಸಭೆಗಳನ್ನು ನಡೆಸಿವೆ. ಕಳೆದ ವಾರ ರಷ್ಯಾದ ಉಪ ಪ್ರಧಾನ ಮಂತ್ರಿ ಡೆನಿಸ್ ಮಂಟುರೊವ್ ಅವರು ವ್ಯಾಪಾರ ಮತ್ತು ಆರ್ಥಿಕ ಸಂಬಂಧಗಳು, ಇಂಧನ, ಸಂಪರ್ಕ ಸೇರಿದಂತೆ ವಿವಿಧ ಕ್ಷೇತ್ರ ಗಳಲ್ಲಿ ಭಾರತ-ರಷ್ಯಾ ಸಹಕಾರವನ್ನು ಹೆಚ್ಚಿಸುವ ಕುರಿತು ಪ್ರಧಾನಿ ಮೋದಿ ಅವರೊಂದಿಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದರು.

Exit mobile version