Site icon PowerTV

ಅದಾನಿಯನ್ನು ತಕ್ಷಣವೆ ಬಂಧಿಸಿ ಎಂದು ಮೋದಿ ಸರ್ಕಾರಕ್ಕೆ ಆಗ್ರಹಿಸಿದ ರಾಹುಲ್​​ ಗಾಂಧಿ

ದೆಹಲಿ: ಅಮೆರಿಕದಲ್ಲಿ ಭಾರತದ ಕೈಗಾರಿಕೋದ್ಯಮಿ ಗೌತಮ್ ಅದಾನಿ ವಿರುದ್ಧ ಲಂಚ ಮತ್ತು ವಂಚನೆ ಆರೋಪ ಹೊರಿಸಲಾಗಿದ್ದು, ಕೈಗಾರಿಕೋದ್ಯಮಿ ಗೌತಮ್ ಅದಾನಿಯನ್ನು ಕೂಡಲೇ ಬಂಧಿಸಬೇಕು ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಒತ್ತಾಯಿಸಿದ್ದಾರೆ.

ಲಂಚ ಪ್ರಕರಣದಲ್ಲಿ ಭಾರತದ ಖ್ಯಾತ ಉದ್ಯಮಿ ಗೌತಮ್​ ಅದಾನಿ ವಿರುದ್ಧ ಅಮೆರಿಕದ ನ್ಯೂಯಾರ್ಕ್ ಕೋರ್ಟ್​ನಲ್ಲಿ ಪ್ರಕರಣ ದಾಖಲಾದ ಬೆನ್ನಲ್ಲೇ ಕೇಂದ್ರಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಭಾರತದ ಕೈಗಾರಿಕೋದ್ಯಮಿ ಗೌತಮ್ ಅದಾನಿ ವಿರುದ್ಧ ಲಂಚ ಮತ್ತು ವಂಚನೆ ಆರೋಪ ಹೊರಿಸಲಾಗಿದ್ದು, ಕೈಗಾರಿಕೋದ್ಯಮಿ ಗೌತಮ್ ಅದಾನಿಯನ್ನು ಕೂಡಲೇ ಬಂಧಿಸಬೇಕು ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಒತ್ತಾಯಿಸಿದ್ದಾರೆ.

ಸದಾ ಆದಾನಿ ಮತ್ತು ಅಂಭಾನಿ ಬಗ್ಗೆ ವಾಗ್ದಾಳಿ ನಡೆಸುವ ರಾಹುಲ್​​ ಇಂದು ಸಹ ದೆಹಲಿಯಲ್ಲಿ ಪತ್ರಿಕಾಗೋಷ್ಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದು. ಅದಾನಿಯನ್ನು ಮತ್ತು ಸೆಬಿ ಮುಖ್ಯಸ್ತೆ ಮಾಧುಬಿ ಪುರಿ ಬುಚ್​​ರನ್ನು ಈ ಕೂಡಲೇ ಬಂಧಿಸಿ ಅವರ ವಿರುದ್ದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

Exit mobile version