Monday, August 25, 2025
Google search engine
HomeUncategorizedಸಂಡೂರು ಉಪಚುನಾವಣೆ : ಮತಎಣಿಕೆಗೆ ಸಕಲ ಸಿದ್ದತೆ ನಡೆಸಿದ ಜಿಲ್ಲಾಡಳಿತ

ಸಂಡೂರು ಉಪಚುನಾವಣೆ : ಮತಎಣಿಕೆಗೆ ಸಕಲ ಸಿದ್ದತೆ ನಡೆಸಿದ ಜಿಲ್ಲಾಡಳಿತ

ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆಯು ಸುಸೂತ್ರವಾಗಿ ನಡೆದಿದ್ದು, ಶೇ.76.02 ರಷ್ಟು ಮತದಾನವಾಗಿದೆ. ಮತ ಎಣಿಕೆ ಕಾರ್ಯವು ನ.23 ರಂದು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದ್ದು, ಕೇಂದ್ರ ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಎಲ್ಲಾ ರೀತಿಯ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣೆಯ ಚುನಾವಣಾಧಿಕಾರಿ ಹಾಗೂ ಸಹಾಯಕ ಆಯುಕ್ತರಾದ ರಾಜೇಶ್ ಹೆಚ್.ಡಿ ಅವರು ಹೇಳಿದರು.

ಸಂಡೂರು ವಿಧಾನಸಭೆ ಉಪಚುನಾವಣೆಯ ಮತ ಎಣಿಕೆ ಕಾರ್ಯ ಕುರಿತಂತೆ ಶುಕ್ರವಾರ ಸಹಾಯಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ನ.23 ರಂದು ಬೆಳಿಗ್ಗೆ 08 ಗಂಟೆಯಿಂದ ಮತಗಳ ಏಣಿಕೆ ಕಾರ್ಯ ಪ್ರಾರಂಭವಾಗಲಿದೆೆ. ಇದಕ್ಕೂ ಮುನ್ನ 07 ಗಂಟೆಗೆ ಭದ್ರತಾ ಕೊಠಡಿ ತೆರೆಯಲಾಗುವುದು. ಮತ ಎಣಿಕೆ ಕೇಂದ್ರದಲ್ಲಿ 253 ಮತಗಟ್ಟೆಗಳ ಮತಯಂತ್ರಗಳು, 13 ಅಂಚೆ ಮತಗಳ ಏಣಿಕೆ ಮತ್ತು ಇಟಿಪಿಬಿಎಸ್-04 ಮತ ಏಣಿಕೆ ಕಾರ್ಯ ನಡೆಯಲಿದೆ ಎಂದು ತಿಳಿಸಿದರು.
ಮತ ಎಣಿಕೆ ಕಾರ್ಯವನ್ನು ಸುಗಮವಾಗಿ ಕೈಗೊಳ್ಳಲು 14+1 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್‌ಗೆ ಒಬ್ಬರು ಏಣಿಕಾ ಮೇಲ್ವಿಚಾರಕರು, ಒಬ್ಬರು ಏಣಿಕಾ ಸಹಾಯಕರು, ಒಬ್ಬರು ಮೈಕ್ರೋ ಅಬ್ಸವರ‍್ಸ್ಗಳನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದರು.

ಸಂಡೂರು ವಿಧಾನಸಭೆ ಉಪಚುನಾವಣೆಯ ಮತ ಎಣಿಕಾ ಕಾರ್ಯಕ್ಕೆ 19 ಏಣಿಕಾ ಮೇಲ್ವಿಚಾರಕರು, 21 ಎಣಿಕಾ ಸಹಾಯಕರು ಮತ್ತು 20 ಎಣಿಕಾ ಮೈಕ್ರೋ ಅಬ್ಸವರ‍್ಸ್ಗಳನ್ನು ನೇಮಕ ಮಾಡಲಾಗಿದೆ. ಮತ ಎಣಿಕೆ ಅಧಿಕಾರಿಗಳು, ಸಹಾಯಕರಿಗೆ ಈಗಾಗಲೇ ತರಬೇತಿ ನೀಡಲಾಗಿದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments