Tuesday, September 2, 2025
HomeUncategorizedಸಮಯ ಬಂದಾಗ ರಾಜಕೀಯ ಪ್ರವೇಶ ಮಾಡುತ್ತೇನೆ : ರಾಬರ್ಟ್ ವಾದ್ರಾ

ಸಮಯ ಬಂದಾಗ ರಾಜಕೀಯ ಪ್ರವೇಶ ಮಾಡುತ್ತೇನೆ : ರಾಬರ್ಟ್ ವಾದ್ರಾ

ಕೇರಳ: ವಯನಾಡ್ ಲೋಕಸಭಾ ಉಪಚುನಾವಣೆಯಲ್ಲಿ 3 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿರುವ ಪತ್ನಿ ಪ್ರಿಯಾಂಕಾ ಗಾಂಧಿ ಅವರಿಗೆ ಅಭಿನಂದನೆ ಸಲ್ಲಿಸಿರುವ ರಾಬರ್ಟ್ ವಾದ್ರಾ, ಪ್ರಿಯಾಂಕಾ ಅವರಿಗೆ ಬೆಂಬಲ ನೀಡಿದ ವಯನಾಡ್ ಜನತೆಗೆ ಧನ್ಯವಾದ ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ವಾದ್ರಾ, ‘ಸಂಸತ್ತಿನಲ್ಲಿದ್ದು ಜನರ ಸಮಸ್ಯೆಗಳಿಗೆ ಪ್ರಿಯಾಂಕಾ ಧ್ವನಿಯಾಗಬೇಕೆಂಬ ಆಸೆ ನನ್ನದಾಗಿತ್ತು. ದಾಖಲೆಯ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂಬ ಭರವಸೆಯೂ ಇದ್ದಿತ್ತು’ ಎಂದರು.

ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನಮ್ಮ ಮೇಲೆ ಜನರ ಪ್ರೀತಿಯನ್ನು ನೀವು ಕಾಣಬಹುದು. ಜನರಿಗಾಗಿ ನಾನು ಕೆಲಸ ಮಾಡುತ್ತಲೇ ಇದ್ದೇನೆ. ಹಾಗೆಂದ ಮಾತ್ರಕ್ಕೆ ಈಗಲೇ ಸಂಸತ್ತಿನಲ್ಲಿ ಇರಬೇಕೆಂದು ನಾನು ಬಯಸುವುದಿಲ್ಲ. ಇದೀಗ ಪ್ರಿಯಾಂಕಾ ಸಂಸತ್ತನ್ನು ಪ್ರವೇಶಿಸಲು ತಯಾರಿ ನಡೆಸುತ್ತಿದ್ದಾರೆ. ಸಮಯ ಬಂದಾಗ ರಾಜಕೀಯ ಪ್ರವೇಶದ ಬಗ್ಗೆ ಯೋಚಿಸುತ್ತೇನೆ’ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments